ವಿಧಾನಸಭಾ ಚುನಾವಣೆ: ಗೃಹರಕ್ಷಕದಳದ ಸಿಬ್ಬಂದಿಗಳಿಗೆ ಎರಡು ದಿನಗಳ ವಿಶೇಷ ತರಬೇತಿ

0
18

ಕಲಬುರಗಿ; ಮುಂಬರುವ ವಿಧಾನಸಭೆ ಚುನಾವಣೆ-2023ರ ಪ್ರಯುಕ್ತ ಗೃಹರಕ್ಷಕ ದಳ ಮತ್ತು ಪೌರರಕ್ಷಣೆಯ ಮಹಾ ಸಮಾದೇಷ್ಟರ ನಿರ್ದೇಶನದಂತೆ ಕಲಬುರಗಿ ನಗರದ ರಾಜಾಪೂರ ರಸ್ತೆಯಲ್ಲಿರುವ ಗೃಹರಕ್ಷಕದಳದ ಕಚೇರಿ ಆವರಣದಲ್ಲಿ ಗೃಹ ರಕ್ಷಕದಳ ಸಿಬ್ಬಂದಿಗಳಿಗೆ ಇದೇ ಮಾರ್ಚ್ 25 ಹಾಗೂ 26 ರಂದು  ಎರಡು ದಿನಗಳ ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಈ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಸಂತೋಷ ಪಾಟೀಲ ಅವರು ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಂದೋಬಸ್ತು ಕರ್ತವ್ಯ ನಿರ್ವಹಣೆ ಕುರಿತು ಮಾಹಿತಿ ನೀಡಿದಲ್ಲದೇ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಹಾಗೂ ಗೃಹರಕ್ಷಕರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಮುಂಬರುವ ವಿಧಾನಸಭೆ ಚುನಾವಣೆ ಶಾಂತಿಯುತವಾಗಿ ನಡೆಯಲು ಈಗಿನಿಂದಲೇ ಸನ್ನದ್ಧರಾಗಬೇಕು ಎಂದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಜಿಲ್ಲಾ ಬೋಧಕರಾದ ಹಣಮಂತರಾಯಗೌಡ ಅವರು ಗೃಹ ರಕ್ಷಕದಳ ಕಾರ್ಯಗಳು ಹಾಗೂ ಸೇವೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಜಿಲ್ಲಾ ಗೃಹರಕ್ಷಕದಳದ ಉಪ ಸಮಾದೇಷ್ಟರಾದ ಮಲ್ಲಪ್ಪ ಅವರು ಮಾತನಾಡಿ, ಚುನಾವಣೆ ನೀತಿ ಸಂಹಿಂತೆ ಪ್ರಾರಂಭವಾದಾಗಿನಿಂದ ಮುಗಿಯುವ ಅವಧಿಯಲ್ಲಿ ಗೃಹರಕ್ಷಕರು ನಿರ್ವಹಿಸಬೇಕಾದ ಕರ್ತವ್ಯ ಕುರಿತು ತಿಳಿಸಿಕೊಟ್ಟರು.

ಕಾರ್ಯಾಗಾರದಲ್ಲಿ ಸೀನಿಯರ್ ಪ್ಲಾಟೂನ್ ಕಮಾಂಡರ್ ಲಿಂಗಣ್ಣ ಪೂಜಾರಿ, ಪ್ಲಾಟೂನ್ ಕಮಾಂಡರ್ ಚಂದ್ರಕಾಂತ ಹಾವನೂರ, ಮಲ್ಲಯ್ಯಾಸ್ವಾಮಿ, ಬಸಯ್ಯಾ ಸ್ವಾಮಿ ಸೇರಿದಂತೆ ಪುರುಷ ಮತ್ತು ಮಹಿಳಾ ಗೃಹರಕ್ಷಕರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here