ಕಲಬುರಗಿ; ಅಲಿಂಕೋ ಬೆಂಗಳೂರು, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಶ್ರೀ ಗೋಪಾಲದೇವ ಜಾಧವ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ ಎಲ್ಲಾ 9 ತಾಲೂಕಿನ ವಿಕಲಚೇತನ ಫಲಾನುಭವಿಗಳಿಗೆ ಅವಶ್ಯವಾದ ಸಾಧನ ಸಲಕರಣೆಗಳನ್ನು ಡಾ. ಎಸ್.ಎಮ್. ಪಂಡಿತ ರಂಗಮಂದಿರದಲ್ಲಿ ಶನಿವಾರ ವಿತರಿಸಲಾಯಿತು.
ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ (ದಿವ್ಯಾಂಗಜನ್), ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಕೋ) ಕಾನಪೂರ್ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಅಂಗವೈಕಲ್ಯ ಮತ್ತು ಪುನರ್ವಸತಿ ಕೇಂದ್ರ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವೈಕಲ್ಯ ಮತ್ತು ಪುನರ್ವಸತಿ ಕೇಂದ್ರ ಕಲಬುರಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನ ಫಲಾನುಭವಿಗಳಿಗೆ ಅವಶ್ಯವಾದ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಅರುಣಕುಮಾರ ಪವಾರ, ಗೋಪಾಲದೇವ ಜಾಧವ ಮೆಮೋರಿಯಲ್ ಟ್ರಸ್ಟ್ ಕಾರ್ಯದರ್ಶಿ ಅಬ್ದುಲ ವಹೀದ್ ಮುನೀರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅನುರಾದಾ ಡಿ, ಡಿ.ಡಿ.ಆರ್.ಸಿ ನೋಡಲ್ ಅಧಿಕಾರಿ ಜಯಪ್ರಕಾಶ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.