ಕಲಬುರಗಿಯಲ್ಲಿ ಇಂದು 36 ಅಭ್ಯರ್ಥಿಗಳಿಂದ 41 ನಾಮಪತ್ರ ಸಲ್ಲಿಕೆ

0
25

ಕಲಬುರಗಿ; 9 ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಬುಧವಾರ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ 36 ಅಭ್ಯರ್ಥಿಗಳಿಂದ 41 ನಾಮಪತ್ರಗಳು ಸಲ್ಲಿಕೆಯಾಗಿವೆ. ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.

34-ಅಫಜಲಪುರ ವಿಧಾನಸಭಾ ಕ್ಷೇತ್ರ: ಸ್ವತಂತ್ರ ಅಭ್ಯರ್ಥಿಯಾಗಿ ನಿತೀನ ತಂದೆ ವೆಂಕಯ್ಯ ಗುತ್ತೇದಾರ್, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಹುಚಪ್ಪ ಬಸÀಪ್ಪ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಕಲ್ಲಪ್ಪ ಗುರಪ್ಪ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.

Contact Your\'s Advertisement; 9902492681

35-ಜೇವರ್ಗಿ ವಿಧಾನಸಭಾ ಕ್ಷೇತ್ರ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಮಲ್ಲಿಕಾರ್ಜುನಪ್ಪ ಗೋಗಿ ಅವರು 2 ನಾಮಪತ್ರ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ವಿಶ್ವನಾಥ ರೆಡ್ಡಿ ಅವರು 1 ನಾಮಪತ್ರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಶರಣಪ್ಪ ಅವರು 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಬೈಲಪ್ಪ ಅವರು 1 ನಾಮಪತ್ರ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಶಿವರಾಜ ಅಪ್ಪಸಾಬ ಅವರು 2 ನಾಮಪತ್ರ,  ಪಕ್ಷೇತರ ಅಭ್ಯರ್ಥಿಯಾಗಿ ಫಜಲ್ ಬೇಗ್ ಅವರು 1 ನಾಮಪತ್ರ ಹಾಗೂ ರಾಷ್ಟ್ರೀಯ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಶಿವಲಿಂಗಪ್ಪ ಕಿನ್ನೂರ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.

40-ಚಿತ್ತಾಪುರ ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಣಿಕಂಠ ರಾಠೋಡ ಅವರು 2 ನಾಮಪತ್ರ ಸಲ್ಲಿಸಿದ್ದಾರೆ.

41-ಸೇಡಂ ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರಾಜಕುಮಾರ ವೀರಶೆಟ್ಟಪ್ಪ ಅವರು 2 ನಾಮಪತ್ರ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಲಲ್ಲೇಶರಡ್ಡಿ @ ಜಿ. ಲಲನಾಥ ರೆಡ್ಡಿ ಅವರು 1 ನಾಮಪತ್ರ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಕಟಸಾನಿ ದೇದಿಪ್ಯಾರಾಣಿ ಅವರು 1 ನಾಮಪತ್ರ ಹಾಗೂ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಬಾಲಯ್ಯ @ ಬಾಲರಾಜ್ ಗುತ್ತೇದಾರ್ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.

42-ಚಿಂಚೋಳಿ ವಿಧಾನಸಭಾ ಕ್ಷೇತ್ರ: ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಗೌತಮ ಬಕ್ಕಪ್ಪ ಹಾಗೂ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುಭಾಷ ವಿ. ರಾಠೋಡ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.

 43-ಗುಲಬರ್ಗಾ (ಗ್ರಾಮೀಣ) ವಿಧಾನಸಭಾ ಕ್ಷೇತ್ರ:  ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ರಾಘವೇಂದ್ರ ಚಿಂಚನಸೂರ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾಕ್ರ್ಸಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಪಾಂಡುರಂಗ ಮಾವಿನಕರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ರಾಜೇಶ ಭರಮಣ್ಣ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.

44-ಗುಲಬರ್ಗಾ (ದಕ್ಷಿಣ) ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಜೀಲಾನ್ ಪಾಷಾ, ಸೋಶಿಯಾಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಮಹೇಶ ಸುಭಾರಾವ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ವಿಜಯ ಗೋವಿಂದ ಹಾಗೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ದತ್ತಾತ್ರೇಯ ಚಂದ್ರಶೇಖರ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.

45-ಗುಲಬರ್ಗಾ (ಉತ್ತರ) ವಿಧಾನಸಭಾ ಕ್ಷೇತ್ರ: ಶರಣಬಸಪ್ಪ ಶ್ರೀಮಂತಪ್ಪ ಅವರು ಜನತಾದಳ (ಯುನಿಟೆಡ್) ಪಕ್ಷದ ಅಭ್ಯರ್ಥಿಯಾಗಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ತಲಾ 1 ನಾಮಪತ್ರ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಸಂಜು ಲಾಲಪ್ಪಾ, ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ನಾಸೀರ ಹುಸೇನ್, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕನೀಜ್ ಫಾತೀಮಾ ಹಾಗೂ ಭಾರತೀಯ ಜನ ಸಾಮ್ರಾಟ ಪಕ್ಷದ ಅಭ್ಯರ್ಥಿಯಾಗಿ ತಾರಾಬಾಯಿ ಭೋವಿ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.

46-ಆಳಂದ ವಿಧಾನಸಭಾ ಕ್ಷೇತ್ರ: ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿಯಾಗಿ ಮಹೇಶ್ವರಿ ಶಿವಕುಮಾರ ವಾಲಿ, ಸ್ವತಂತ್ರ ಅಭ್ಯರ್ಥಿಯಾಗಿ ಅಪ್ಪಾರಾವ ಪಾಟೀಲ, ಸ್ವತಂತ್ರ ಅಭ್ಯರ್ಥಿಯಾಗಿ ಪಂಡಿತ ರುದ್ರಪ್ಪ, ಸ್ವತಂತ್ರ ಅಭ್ಯರ್ಥಿಯಾಗಿ ಉಮರ ಫಾರುಕ,  ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಶಿವಕುಮಾರ ಖೇಡ, ಸ್ವತಂತ್ರ ಅಭ್ಯರ್ಥಿಯಾಗಿ ಮಹಿಬೂಬ್ ಭಾಷಾ, ಭಾರತೀಯ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಮೌಲಾ ಸಾಬ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಯ ಆರಂಭ ದಿನದಿಂದ ಇಲ್ಲಿಯವರೆಗೆ ಒಟ್ಟಾರೆ 101 ಅಭ್ಯರ್ಥಿಗಳಿಂದ 119 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20  ಕೊನೆಯ ದಿನವಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here