ಮತದಾನ ಮುಕ್ತಾಯವಾಗುವರೆಗೆ ಕಲಬುರಗಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿ; ಡಿ.ಸಿ. ಆದೇಶ

0
26

ಕಲಬುರಗಿ; ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೇ 10 ರಂದು ಮತದಾನ ನಡೆಯಲಿದೆ. ಇದರ ಪ್ರಯುಕ್ತ ಮೇ 8 ರ ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನವು ಮುಕ್ತಾಯವಾಗುವವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ರನ್ವಯ ಕೆಳಕಂಡಂತೆ ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.

ಕಲಬುರಗಿ ನಗರ ಮತ್ತು ಜಿಲ್ಲೆಯ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿμÉೀಧಿಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

Contact Your\'s Advertisement; 9902492681

ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿμÉೀಧ: ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿμÉೀಧಿಸಲಾಗಿದ್ದು, ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ ಅಂಗಡಿ, ಬುಕ್ಸ್ ಸ್ಟಾಲ್ ಹಾಗೂ ಸೈಬರ್ ಕೆಫೆಗಳನ್ನು ನಿರ್ಭಂಧಿಸಿದೆ.

ಕಲ್ಲುಗಳನ್ನು, ಕಾರ ಪದಾರ್ಧ ಇಲ್ಲವೆ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿμÉೀಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿμÉೀಧಿಸಲಾಗಿದೆ. ಮನುಷ್ಯನ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.

ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿμÉೀಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು, ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿμÉೀಧಿಸಲಾಗಿದೆ.

ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದನ್ನು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೆÇಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೇರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು/ನಿಯಮಗಳನ್ನು ಪಾಲಿಸಬೇಕು.

ಮತಗಟ್ಟೆಗಳ ಸುತ್ತ 100 ಮೀಟರ್ ಅಂತದಲ್ಲಿ ಮೊಬೈಲ್ ನಿಷೇಧ: ಮತಗಟ್ಟೆಗಳ ಸುತ್ತಲೂ 100 ಮೀಟರ್ ಅಂತರದಲ್ಲಿ ಮೊಬೈಲ್ ಫೆÇೀನ್, ಕಾರ್ಡಲೆಸ್ ಫೆÇೀನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ/ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ) ನಿμÉೀಧಿಸಲಾಗಿದೆ.

ಮತಗಟ್ಟೆಗಳ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೆÇೀಸ್ಟರ್/ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಈ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು/ಹೋಟೆಲ್‍ಗಳು ಮತ್ತು ಅತಿಥಿಗೃಹಗಳನ್ನು ವಾಸ್ತವ್ಯ ಹೊಡಿದವರ ಪಟ್ಟಿಗಳ ಪರಿಶೀಲನೆ ಮಾಡಿ ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸಬೇಕು.
ಈ ಆದೇಶವನ್ನು ಉಲ್ಲಂಘಿಸುವವರು ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುತ್ತದೆ.

ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ/ಪೆÇಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here