ಗುಜರಾತ್: ಇಲ್ಲಿನ ಸುರೇಂದ್ರ ನಗರದಲ್ಲಿ ಇಂದು ನಡೆದ ಕಾಂಗ್ರೆಸ್ ಪಕ್ಷದ ಜನಾಕ್ರೋಸ ಸಭೆಯಲ್ಲಿ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.
ಹಾರ್ದಿಕ್ ಪಟೇಲ್ ಭಾಷಣ ಮಾಡುತ್ತಿದ್ದ ವೇಳೆ ಒಮ್ಮಿದೊಮ್ಮೆಲೆ ಅಟ್ಯಾಕ್ ಮಾಡಿದ ಕಾರ್ಯಕರ್ತ,ಹಾರ್ದಿಕ್ ಪಟೇಲ್ ಕೆನ್ನೆಗೆ ಬಾರಿಸಿದ್ದಾನೆ.
ಸ್ಥಳದಲ್ಲಿಯೇ ಇದ್ದ ಕಾಂಗ್ರೆಸ್ ಕಾರ್ಯಕರ್ತರು ಸಹ ಆ ವ್ಯಕ್ತಿಯನ್ನು ಹಿಡಿದು ಥಳಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ