ಆರೋಗ್ಯ ಕೇಂದ್ರದಿಂದ ಮತದಾನ ಜಾಗೃತಿ ಪ್ರಭಾತ ಪೇರಿ

0
35

ಶಹಾಬಾದ: ನಗರದಲ್ಲಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಪ್ರಭಾತ ಪೇರಿ ಜಾಥಾಕ್ಕೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|| ಅಬ್ದುಲ್ ರಹೀಮ್ ಅವರು ಚಾಲನೆ ನೀಡಿದರು.

ನಂತರ ಮಾತನಾಡಿ ಅವರು ವಿಶ್ವದಲ್ಲೆ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಗ್ಗಳಿಕೆ ಭಾರತಕ್ಕಿದೆ. ಪ್ರಜಾಪ್ರಭುತ್ವದ ಘನತೆ ಎತ್ತಿ ಹಿಡಿಯುವ ಸಲುವಾಗಿ ಮತ ದಾನದ ಹಕ್ಕನ್ನು ಎಲ್ಲರೂ ಚಲಾಯಿಸಬೇಕು. ದೇಶದ ಮತದಾನ ಪ್ರಮಾಣದಲ್ಲಿ ಗಣನೀಯ ಹೆಚ್ಚಳ ಕಾಣಿಸಿಕೊಳ್ಳುತ್ತಿದೆ.ಜನರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯ ನಾಯಕರನ್ನು ಆಯ್ಕೆ ಮಾಡಲು ಅರ್ಹ ವ್ಯಕ್ತಿಗೆ ಮತದಾನ ಮಾಡುವುದೊಂದೇ ಸೂಕ್ತ ಮಾರ್ಗ.

Contact Your\'s Advertisement; 9902492681

ಭಾರತದ ಸಂವಿಧಾನ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮತದಾನದ ಹಕ್ಕು ನೀಡಿದ್ದು, ಪ್ರತಿಯೊಬ್ಬರು ಮತ ಚಲಾಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು . ಮತದಾನ ಜನ ಜಾಗೃತಿಗೆ ನಮ್ಮ ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಲಕ ಮತದಾನ ಪ್ರಮಾಣ ಹೆಚ್ಚಿಸಲು ವಯೋವೃದ್ದರು, ಅಂಗವಿಕಲರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಅಯೋಗ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸಬೇಕು ಎಂದರು.

ಡಾ.ಅಶ್ವಿನಿ ನಿಡಗುಂದಿ ಮಾತನಾಡಿ,ಅವರು ನನ್ನ ಮತ ನನ್ನ ಹಕ್ಕು , ಪ್ರಮುಖರಾದ18 ವರ್ಷ ತುಂಬಿದ ಪ್ರತಿಯೊಬ್ಬರು ಕಡ್ಡಾಯ ಮತ್ತು ನೈತಿಕ ಹಾಗೂ ವಿವೇಚನಾಯುಕ್ತವಾಗಿ ಮತ ಚಲಾಯಿಸಬೇಕು” ಎಂದು ಕರೆ ನೀಡಿದರು. ಮತದಾನದ ಮಹತ್ವ ಕುರಿತು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು.

ಸಿಬ್ಬಂದಿಗಳಾದ ಮೋಹನಕುಮಾರ, ಸಂಜಯ್ ರಾಠೋಡ,ಚಂದ್ರಕಾಂತ, ರಾಹುಲ,ಹಣಮಂತ, ಅಂಬರೀಷ ಇಟಗಿಕರ್, ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here