ಕಲಬುರಗಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆ-2023ರ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಯಿಂದ ಕಲಬುರಗಿಯ ನಂದೂರ ಇಂಡಸ್ಟ್ರೀಯಲ್ ಏರಿಯಾದ ಯುನಿಟೆಡ್ ಸ್ಪ್ರೀಟ್ ಕಂಪನಿ ಹಾಗೂ ಶ್ರೀ ವೆಂಕಟೇಶ್ವರ ಪಾರ್ಲೆ-ಜಿ ಬಿಸ್ಕೆಟ್ ಕಂಪನಿಯಲ್ಲಿನ ಸಿಬ್ಬಂದಿ ಹಾಗೂ ಕಾರ್ಮಿಕರಿಗೆ ನಗೆ ಹಬ್ಬ ಕಾರ್ಯಕ್ರಮದ ಮೂಲಕ ಮತದಾನ ಕುರಿತು ಬುಧವಾರ ಜಾಗೃತಿ ಮೂಡಿಸಲಾಯಿತು.
ಕಲಬುರಗಿ ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಅವರು ತಮ್ಮ ಹಾಸ್ಯ ಶೈಲಿಯ ಮೂಲಕ ಜನರಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದರು.
ಹಾಸ್ಯ ಕಲಾವಿದರಾದ ಗುಂಡಣ್ಣ ಡಿಗ್ಗಿ ಅವರು ತಮ್ಮ ಹಾಸ್ಯ ಮೂಲಕ ಉತ್ತರ ಕನ್ನಡ ಶೈಲಿಯಲ್ಲಿ ಜನರಿಗೆ ಮತದಾನದ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳಾದ ರಮೇಶ ಸುಂಬಡ್, ತಾಲೂಕು ಸಂಯೋಜಕಿ ಜ್ಯೋತಿ ಬಿ. ಸಾಗರ ಸೇರಿದಂತೆ ಆಯಾ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕ ವರ್ಗದವರು ಇದ್ದರು.