ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದಲ್ಲಿ ನೀತಿಸಂಹಿತೆ ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿ ಬಿಜೆಪಿ ಅಧ್ಯಕ್ಷರ ವಿರುದ್ಧ ಚುನಾವಣಾ ಅಧಿಕಾರಿ ಪ್ರಕರಣ ದಾಖಲಿಸಿದ್ದಾರೆ.
ಮಂಗಳವಾರ ಕಲಬುರಗಿ ನಗರದ ಕೆಎಮ್ಎಫ್ ಕಚೇರಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತದ ವರೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರ ಪ್ರಧಾನಿ ಮೋದಿ ಬೃಹತ್ ರೋಡ್ ಶೋ ನಡೆಸಿದರು.
ಈ ವೇಳೆಯಲ್ಲಿ ಪರವಾನಗಿ ಇಲ್ಲದೇ ಬಿಜೆಪಿ ಚಿಹ್ನೆ ಇರುವ ಬ್ಯಾನರ್ ಮತ್ತು ಕಟೌಟ್ ಹಾಕಿ ನೀತಿಸಂಹಿತೆ ಉಲ್ಲಂಘಿಸಿಸಲಾಗಿದೆ ಎಂದು ಕಲಬುರಗಿ ಉತ್ತರ ಕ್ಷೇತ್ರದ ಜೆಡಿಯು ಅಭ್ಯರ್ಥಿ ಶರಬಸಪ್ಪ ಚುನಾವಣಾ ಅಧಿಕಾರಿಗೆ ದೂರಿ ನೀಡಿದರು.
ಈ ಹಿನ್ನೆಲೆಯಲ್ಲಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.