ಮತ ಎಣಿಕೆ ಕೇಂದ್ರದ ಸುತ್ತಲೂ ನಿರ್ಬಂಧಿತ ಪ್ರದೇಶ ಘೋಷಣೆ

0
40

ಕಲಬುರಗಿ; ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಇದೇ ಮೇ 13 ರಂದು ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 13 ರ ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯ ವರೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕಂಪೌಂಡದಿಂದ 100 ಮೀಟರ್ ಪ್ರದೇಶದಲ್ಲಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ-1973ರ ಕಲಂ 144 ರನ್ವಯ ಕೆಲವೊಂದು ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದ ಕಂಪೌಂಡದಿಂದ 100 ಮೀಟರ್ ಪ್ರದೇಶದಲ್ಲಿ ಮೆರವಣಿಗೆ ಅಥವಾ 5 ಕ್ಕಿಂತ ಹೆಚ್ಚು ಜನರು ಗುಂಪು ಕೂಡಿ ಓಡಾಡುವುದನ್ನು ನಿμÉೀಧಿಸಿದೆ. ಇದಲ್ಲದೇ ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

Contact Your\'s Advertisement; 9902492681

ಮತ ಎಣಿಕೆ ಕೇಂದ್ರಕ್ಕೆ ಕಲ್ಲುಗಳನ್ನು, ಖಾರ ಪದಾರ್ಧ ಇಲ್ಲವೆ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿμÉೀಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.

ಮತ ಎಣಿಕೆ ಕೇಂದ್ರ ಮತ್ತು ಸುತ್ತಮುತ್ತ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಸಹ ನಿμÉೀಧಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು, ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿμÉೀಧಿಸಲಾಗಿದೆ.

ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡು ಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೆÇಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಇದಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಪ್ರತಿಬಂಧಾಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು/ನಿಯಮಗಳನ್ನು ಪಾಲಿಸಬೇಕು.

ಆ ಆದೇಶ ಕಟ್ಟುನಿಟ್ಟಾಗಿ ಅನುಷ್ಟಾನಕ್ಕೆ ತರುವಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿಲಾಗಿದೆ. ಯಾರಾದರು ಇದನ್ನು ಉಲ್ಲಂಘಿಸಿದ್ದಲ್ಲಿ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಮೊಬೈಲ್ ಫೋನ್, ಪೋಸ್ಟರ್-ಬ್ಯಾನರ್ ನಿಷೇಧ: ಮತ ಎಣಿಕೆ ಕೇಂದ್ರ ಹಾಗೂ ಇದರ ಸುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ಫೆÇೀನ್, ಕಾರ್ಡಲೆಸ್ ಫೆÇೀನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ/ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು/ಸಿಬ್ಬಂದಿಗಳು ಹೊರತುಪಡಿಸಿ) ತೆಗೆದುಕೊಂಡು ಹೋಗುವುದನ್ನುÀ್ಮತ್ತ ಎಣಿಕೆ ಕೇಂದ್ರ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೆÇೀಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸಲು ಸಹ ನಿμÉೀಧಿಸಲಾಗಿದೆ.

ಶಾಯಿ ಪೆನ್, ತಂಬಾಕು-ಗುಟಕಾ ನಿಷೇಧ: ಮತ ಎಣಿಕೆ ಕೇಂದ್ರ ಹಾಗೂ ಸುತ್ತ 100 ಮೀಟರ್ ಪರಿಮಿತಿಯಲ್ಲಿ ಶಾಯಿ ಪೆನ್, ತಂಬಾಕು, ಸಿಗರೇಟ್, ಗುಟಕಾ ಇತ್ಯಾದಿ ಸೇವಿಸುವ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ನಿμÉೀಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಹ ಬಳಸುವಂತಿಲ್ಲ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here