ಕಸಾಪದಿಂದ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪುರಸ್ಕಾರ

0
147

ಕಲಬುರಗಿ: ಪುಸ್ತಕಗಳು ನಮ್ಮ ಜೀವನದ ಸಂಗಾತಿಯಿದ್ದಂತೆ. ಪ್ರತಿಯೊಬ್ಬರೂ ದಿನದಲ್ಲಿ ಒಮದು ಗಂಟೆ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳ ಅಧ್ಯಯನ ನಮ್ಮ ಜೀವನದಲ್ಲಿ ಹಲವು ಬದಲಾವಣೆಗಳಿಗೆ ಕಾರಣವೂ ಆಗುತ್ತದೆ ಎಂದು ಹಿರಿಯ ಸಾಹಿತಿ ಡಾ. ಕಾಶಿನಾಥ ಅಂಬಲಗೆ ಅಭಿಪ್ರಾಯಪಟ್ಟರು.

ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳು ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಗೌರವ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪುಸ್ತಕ ಓದುವುದರಿಂದ ನಮ್ಮಲ್ಲಿ ಆಲೋಚನಾ ಶಕ್ತಿ ಹೆಚ್ಚುತ್ತದೆ. ಪರಿಷತ್ತು ಇಂಥ ಕಾರ್ಯಕ್ರಮಗಳು ಆಯೋಜಿಸಿ ಪುಸ್ತಕ ಓದುವ ಸಂಸ್ಕøತಿಯನ್ನು ಹುಟ್ಟು ಹಾಕುವ ಮೂಲಕ ಮುಂದಿನ ಪೀಳಿಗೆಗೆ ನಾವು ದಾರಿ ದೀಪವಾಗುತ್ತಿವೆ ಜತೆಗೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಿ ಪ್ರೋತ್ಸಾಹಿಸುವ ಕಾರ್ಯ ಮೆಚ್ಚುವಂತಹದ್ದು ಎಂದರು.

Contact Your\'s Advertisement; 9902492681

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಪ್ರತಿಯೊಬ್ಬರೂ ಕನ್ನಡ ಭಾಷಾಭಿಮಾನವನ್ನು ಹೆಚ್ಚಾಗಿ ರೂಢಿಸಿಕೊಂಡು ನಮ್ಮ ನಾಡಿನ ಗತ ವೈಭವ ಸಂಸ್ಕøತಿ ಪರಂಪರೆಯನ್ನು ವಿಶ್ವದಾದ್ಯಂತ ಪ್ರಚುರಪಡಿಸಬೇಕು. ಇಂಥ ಕಾರ್ಯಕ್ರಮಗಳ ಮೂಲಕ ಹೊಸ ಪೀಳಿಗೆಯಲ್ಲಿ ಮಾತೃಭಾಷಾಭಿಮಾನ ಮೂಡಿಸಿ ಉತ್ತ,ಮ ನಾಡನ್ನು ಕಟ್ಟಲಿಕ್ಕೆ ಪ್ರಯತ್ನಿಸಬೇಕಾಗಿದೆ ಎಂದರು.

ಹಿಂಗುಲಾಂಬಿಕಾ ಬಿ.ಈಡಿ. ಕಾಲೇಜಿನ ಪ್ರಾಂಶುಪಾಲರಾದ ಗೀತಾ ಮೋರೆ  ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕಗಳಿಕೆಯ ಜೆತಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಂಡು ಕನ್ನಡ ಸಾಹಿತ್ಯ ಹಾಗೂ ಪರಂಪರೆಯ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ನಾಡು-ನುಡಿಯ ಬಗ್ಗೆ ಗೌರವ ಮನೋಭಾವ ಹೊಂದಬೇಕು ಎಂದರು.

ಸಂಶೋಧಕ ಮುಡುಬಿ ಗುಂಡೇರಾವ ಮಾತನಾಡಿ, ವಿದ್ಯಾರ್ಥಿಗಳು ಇಂದು ಸ್ವೀಕರಿಸಿರುವ ಸನ್ಮಾನವನ್ನು ಸ್ಪೂರ್ತಿಯಾಗಿ ಪಡೆದು ಜೀವನದಲ್ಲಿ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಲಿ ಎಂದು ಹಾರೈಸಿದರು.

ಜಿಲ್ಲಾ ಸರಕಾರಿ ನೌಕರರ ಸಂಘದ ಚಂದ್ರಕಾಂತ ಏರಿ, ಡಾ. ಮಚೇಂದ್ರನಾಥ ಮೂಲಗೆ, ವೆಂಕುಬಾಯಿ ರಜಪೂತ, ಕಲ್ಯಾಣಕುಮಾರ ಶೀಲವಂತ, ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಪದಾಧಿಕಾರಿಗಳಾದ ರಾಜೇಂದ್ರ ಮಾಡಬೂಳ, ಬಾಬುರಾವ ಪಾಟೀಲ ಚಿತ್ತಕೋಟಾ, ಸೋಮಶೇಖರಯ್ಯಾ ಹೊಸಮಠ, ಶರಣಬಸವ ಜಂಗಿನಮಠ, ರಾಜೇಶ್ವರಿ ಸಾಹು, ಓಂಪ್ರಕಾಶ ವಸ್ತ್ರದ್, ವಿಶ್ವನಾಥ ತೊಟ್ನಳ್ಳಿ, ಧರ್ಮಣ್ಣಾ ಹೆಚ್ ಧನ್ನಿ, ಹೆಚ್ ಎಸ್ ಬರಗಾಲಿ, ಎಸ್.ಎಂ.ಪಟ್ಟಣಕರ್,  ಪ್ರಮುಕರಾದ ಸೋಮಶೇಖರ ನಂದಿಧ್ವಜ, ಸುನೀಲ ಹಡಪದ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಸುಮಾರು ಐವತ್ತಕ್ಕೂ ಹೆಚ್ಚು ಜಿಲ್ಲೆಯ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here