ಸುರಪುರ: ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳನ್ನು ಮಳೆ ಗಾಳಿ ಹಾಗೂ ಇತರೆ ಹವಾಮಾನ ವೈಪರಿತ್ಯಗಳಿಂದ ಆಹಾರ ಧಾನ್ಯಗಳ ಸಂರಕ್ಷಿಸಿಕೊಳ್ಳಲು ಸರಕಾರ ಸಬ್ಸಿಡಿ ದರದಲ್ಲಿ ತಾಡಪತ್ರಿಗಳನ್ನು ವಿತರಿಸಲಾಗುತ್ತಿದ್ದು ಅಗತ್ಯವಿರುವ ರೈತರು ಅರ್ಜಿ ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಗುರುನಾಥ ಭೂಸನೂರೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಸಾಮಾನ್ಯ ರೈತರಿಗೆ ಶೇ 50 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90 ರಷ್ಟು ಸಹಾಯಧನ ದೊರೆಯಲಿದೆ.ಆದ್ದರಿಂದ ತಾಡಪತ್ರಿ ಬೇಕಾದ ರೈತರು ರೈತ ಸಂಪರ್ಕ ಕೇಂದ್ರಗಳಾದ ಸುರಪುರ,ಕಕ್ಕೇರ,ಕೆಂಭಾವಿ,ಹುಣಸಗಿ ಮತ್ತು ಕೊಡೇಕಲ್ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದು ಹಾಗೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಜೂನ್ 3 ಕೊನೆಯದಿನವಾಗಿದ್ದು,ಹೆಚ್ಚಿನ ಸಂಖ್ಯೆಯ ಅರ್ಜಿಗಳು ಬಂದಲ್ಲಿ ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.