ಬೆಂಗಳೂರು: ಪೊಲೀಸ್ ಠಾಣೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ ಸಂದೇಶ ನೀಡಿದ್ದಾರೆ.
ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸದ ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಮಂಗಳವಾರ ತನ್ನ ಟ್ವಿಟರ್ ಖಾತೆಯ ಮೂಲಕ ಸಂದೇಶ ನೀಡಿದ್ದಾರೆ.
ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆಗಳ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು.
ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು…— CM of Karnataka (@CMofKarnataka) May 23, 2023
ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.
ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು. ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ, ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ ಎಂದು ಖಡಕ ಸೂಚನೆ ನೀಡಿದ್ದಾರೆ.