ಕಲಬುರಗಿ: ಮಧ್ಯಪ್ರದೇಶದ ಸೋಸಿಯಲ್ ಸೈನ್ಸ್ ಅಂಡ್ ಮ್ಯಾನೇಜ್ಮೆಂಟ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ “ಆರ್ಥಿಕ ಅಭಿವೃದ್ಧಿ ಸುಸ್ಥಿರ ಮತ್ತು ಪರಿಸರ” ಕುರಿತು ಎರಡು ದಿನಗಳ ಕಾಲ ನಡೆದಿರುವ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅತಿಥಿ ಸಹಾಯಕ ಪ್ರಾಧ್ಯಾಪಕ ಡಾ. ರಾಜಕುಮಾರ ಎಂ. ದಣ್ಣೂರ ಅವರ ಪತ್ರಿಕೋದ್ಯಮ ಕ್ಷೇತ್ರದ ಶೈಕ್ಷಣಿಕ ಮತ್ತು ಸಂಶೋಧನಾ ಸಾಹಿತ್ಯಿಕ ಸೇವೆಯನ್ನು ಗುರುತಿಸಿ ಅವರಿಗೆ ಯಂಗ್ ಪ್ರೊಫೇಷನಲ್ ಡೌಲ್ಪಮೇಂಟ್ ಉನ್ನತಿ ಇಂಟರ್ನ್ಯಾಷನಲ್ ಅವಾರ್ಡ್ ನೀಡಿ ಗೌರವಿಸಲಾಯಿತು.
ಡಾ. ರಾಜಕುಮಾರ ಎಂ ದಣ್ಣೂರ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಹಿರಿಯ ಡೀನರಾದ ಪ್ರೊ, ವಿ.ಟಿ ಕಾಂಬಳೆ, ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಸಿ. ಕೆ. ಪುಟ್ಟಸ್ವಾಮಿ, ಗ್ರಂಥಾಲಯದ ಮುಖ್ಯ ಗ್ರಂಥಪಾಲಕ ಡಾ. ಸುರೇಶ್ ಜಂಗೆ, ಡಾ. ಪ್ರವೀಣ್ ಕುಮಾರ್ ಕುಂಬಾರ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಚ್ ಎಸ್ ಜಂಗೆ, ನಿವೃತ್ತ ಪ್ರಾಧ್ಯಾಪಕ ಡಾ. ಎಂ. ಎಸ್. ಪಾಸೋಡಿ ಹೋರಾಟಗಾರ ಡಾ. ಗುಂಡಪ್ಪ ಸಿಂಗೆ, ಸಿದ್ದು ದೊಡ್ಡಮನಿ ಇತರರು ಅಭಿನಂದನೆಗಳು ಸಲ್ಲಿಸಿದ್ದಾರೆ.