ನಗರಕ್ಕೆ ಬೆಣ್ಣೆತೊರಾದಿಂದ ಕುಡಿಯುವ ನೀರು ಒದಗಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ತಾಕೀತು

0
17

ಕಲಬುರಗಿ: ನಗರದ‌ ನಿವಾಸಿಗಳಿಗೆ ಬೆಣ್ಣೆತೊರೆಯಿಂದ ಕೂಡಲೇ ಕುಡಿಯುವ ನೀರು ಒದಗಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ ಪ್ರಕಾಶ ಅವರೊಂದಿಗೆ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಬೆಣ್ಣೆತೊರೆಯಿಂದ ಕುಡಿಯುವ ನೀರು ಒದಗಿಸುವಂತೆ ನಾನು ಈಗಾಗಲೇ ಮೂರು ಸಲ ಮನವಿ ಮಾಡಿದ್ದೇನೆ ಆದರೂ ಕೂಡಾ ಅಧಿಕಾರಿಗಳು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ ಸಚಿವರು, ಕಳೆದ ನಾಲ್ಕು ವರ್ಷದಿಂದ ಅಧಿಕಾರಿಗಳು ಮಾಡಿದ್ದೆ ಕೆಲಸ ಆದಂತಿದೆ ಎಂದು ಹರಿಹಾಯ್ದು ನಾಳೆಯಿಂದಲೇ ಕುಡಿಯುವ ನೀರು‌ ಸರಬರಾಜು ಆಗಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಿದರು.

ಸಭೆಯಲ್ಲಿ ಹಾಜಿರಿದ್ದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಮದ್ ಪಟೇಲ್ 2023-24 ಸಾಲಿನ ಪೂರ್ವ ಮುಂಗಾರು ಹಂಗಾಮಿನಲ್ಲಿ ಆಲಿಕಲ್ಲು/ ಸಿಡಿಲು ಬಡಿದು ಒಟ್ಟು 8 ಜನರು ಸಾವನ್ನಪ್ಪಿದ್ದು ತಲಾ 5 ಲಕ್ಷ ಪರಿಹಾರ ವಿತರಿಸಲಾಗಿದೆ. ಈ ಸಲದ ಮುಂಗಾರು ಹಂಗಾಮಿಗೆ ಒಟ್ಟು 8.87 ಲಕ್ಷ ಹೆಕ್ಟೇರ್ ಗುರಿ ನಿಗದಿಪಡಿಸಲಾಗಿದ್ದು ಇದರಲ್ಲಿ 5.93 ಲಕ್ಷ ಹೆಕ್ಟೇರ್ ತೊಗರಿ,24,000 ಹೆಕ್ಟೇರ್ ಉದ್ದು, 51,000 ಹೆಕ್ಟೇರ್ ಹೆಸರು, 99,450 ಹೆಕ್ಟೇರ್ ಹತ್ತಿ, 45, 635 ಹೆಕ್ಟೇರ್ ಕಬ್ಬು, 48,200 ಹೆಕ್ಟೇರ್ ಸೋಯಾಬಿನ್ ಗುರಿನಿಗದಿಪಡಿಸಲಾಗಿದೆ ಎಂದು ವಿವರಿಸಿದರು.

ಪ್ರಸ್ತುತ ಹೆಸರು-1000 ಕ್ವಿಂಟಾಲ್, ಉದ್ದು-_500 ಕ್ವಿಂಟಾಲ್, ತೊಗರಿ-6334 ಕ್ವಿಂಟಾಲ್, ಸೋಯಾಬಿನ್- 18,516 ಕ್ವಿಂಟಾಲ್, ಸೂರ್ಯಕಾಂತಿ – 120 ಕ್ವಿಂಟಾಲ್ ಬಿತ್ತನೆ ಬೀಜ ಲಭ್ಯವಿದೆ ಎಂದು ಅವರು ಹೇಳಿದರು.

ಕಳೆದ ವರ್ಷ ಕಳಪೆ ತೊಗರಿ ಬೀಜ ಬಿತ್ತನೆ ಮಾಡಿದ್ದರಿಂದ ನೆಟೆ ರೋಗ ತಗುಲಿತ್ತು. ಹಾಗಾಗಿ ಅಂತಹ ಬೀಜಗಳ ಕ್ಷಮತೆ ಪರೀಕ್ಷಿಸಲು ನೀವು ಪ್ರಯೋಗಾಲಯಕ್ಕೆ ಕಳಿಸಿದ್ದೀರಾ? ಎಂದು ಕೃಷಿ ಅಧಿಕಾರಿಗಳಿಗೆ ಪ್ರಶ್ನಿಸಿದ ಸಚಿವ ಶರಣ ಪ್ರಕಾಶ ಪಾಟೀಲ ಈ ಸಲ ಮತ್ತೆ ರೈತರು ಅದೇ ತರ ಬೀಜ ಬಿತ್ತನೆ ಮಾಡುವ ಸಾಧ್ಯತೆಯೂ ಇರುವುದರಿಂದ ಸಾಧ್ಯವಾದಷ್ಟು ಹೆಸರು, ಉದ್ದು, ಸೋಯಾಬಿನ್ ಹಾಗೂ ಹತ್ತಿ ಬೆಳೆ ಬೆಳೆಯುವಂತೆ ರೈತರಿಗೆ ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು.

ಮುಂದುವರೆದು ಮಾತನಾಡಿದ ಡಾ ಪಾಟೀಲ್ ಕಳೆದ ವರ್ಷ ಮಳಖೇಡದಲ್ಲಿ ಕಳೆದ ಬೀಜ ಮಾರಾಟ ಮಾಡಿದ ವ್ಯಕ್ತಿಯ ವಿರುದ್ದ ಮಳಖೇಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಚಾರ್ಜ್ ಷೀಟ್ ಹಾಕಿಲ್ಲ ಮೊದಲು ಚಾರ್ಜ ಷೀಟ್ ಹಾಕಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಕಳೆದ ವರ್ಷ ಶೇ 70 ತೊಗರಿ ಹಾಳಾಗಿದೆ ಆದರೆ ಸಂಬಂಧಿಸಿದ ಅಧಿಕಾರಿಗಳು ಶೇ 30 ಎಂದು ವರದಿ ಸಲ್ಲಿಸಿದ್ದಾರೆ. ಇದರಿಂದ ರೈತರಿಗೆ ನ್ಯಾಯಯುತವಾಗಿ ಸಿಗಬೇಕಾದ ಪರಿಹಾರ ಸಿಗದೆ ಅನ್ಯಾಯವಾಗಿದೆ. ಹಾಗಾಗಿ ಈ ಕುರಿತು ಸಮಗ್ರ ತನಿಖೆ ನಡೆಸಿ ಎಂದು‌ ಜಿಲ್ಲಾಧಿಕಾರಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಎಂ ವೈ ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ಡಾ ಅವಿನಾಶ ಜಾಧವ, ಬಸವರಾಜ ಮತ್ತಿಮಡು, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಜಿಲ್ಲಾಧಿಕಾರಿ ಯಶವಂತ ಗುರುಕರ್, ಜಿಪಂ ಸಿಇಓ ಡಾ ಗಿರೀಶ ಬದೋಲೆ, ಎಸ್ ಪಿ ಇಶಾ ಪಂತ್, ಡಿಸಿಪಿ ಶ್ರೀನಿವಾಸಲು ಅಡ್ಡೂರು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here