ಸುರಪುರ: ಪ್ರವಾಸಿ ಮಂದಿರದಲ್ಲಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಶಾಸಕರಾದ ರಾಜಾ ವೆಂಕಟಪ್ಪ ನಾಯಕÀ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆಯನ್ನು ಜರುಗಿಸಲಾಯಿತು.ಸಭೆಯಲ್ಲಿ ಲೊಕೋಪಯೋಗಿ, ಪಂಚಾಯತ ರಾಜ್ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಮಾತನಾಡಿ, ಮತಕ್ಷೇತ್ರದಾದ್ಯಂತ ಕೈಗೊಂಡಿರುವ ಕಾಮಗಾರಿಗಳು ಬಹುತೇಕವಾಗಿ ಕಳಪೆ ಮಟ್ಟದಿಂದ ಕೂಡಿದ್ದು ಮತ್ತು ಲೊಕೋಪಯೋಗಿ ಇಲಾಖೆ ಮತ್ತು ಪಂಚಾಯತ ರಾಜ್ ಇಲಾಖೆಗಳಿಗೆ ಸಂಬಂಧಿಸಿದಂತೆ ಬಹುತೇಕ ಕಾಮಗಾರಿಗಳಿಗೆ ಈಗಾಗಲೆ ಟೆಂಡರ್ ಕರೆದಿದ್ದು ಕಾಮಗಾರಿಳು ಇನ್ನು ಪ್ರಾರಂಭಿಸಿಲ್ಲಾ ಹೀಗಾದರೆ ಕ್ಷೇತ್ರದ ಪ್ರಗತಿ ಹೇಗೆ ಸಾಧ್ಯ ರಸ್ತೆ ತ್ವರಿತವಾಗಿ ಹಾಗೂ ಸರ್ಕಾರದ ನಿಯಮಗಳಂತೆ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಅವಶ್ಯಕತೆಗನುಗುಣವಾಗಿ ಸರ್ಕಾರದ ಅನುದಾನವು ಪೋಲಾಗದಂತೆ ಅಧಿಕಾರಿಗಳು ಎಚ್ಚರ ವಹಿಸಿ ಕಾಮಗಾರಿಗಳನ್ನು ಪ್ರಾರಂಭಿಸಲು ಕ್ರಮವಹಿಸಬೇಕು ಹಿಂದಿನ ಸರ್ಕಾರದ ಆಡಳಿತ ಅವಧಿಯಲ್ಲಿ ಪ್ರಗತಿಗಾಗಿ ಕೈಗೊಂಡಿರುವ ಕಾಮಗಾರಿಗಳನ್ನು ಗುತ್ತಿಗೆದಾರರು ಮತ್ತು ಅಧಿಕಾರಿಗಳು ಶಾಮೀಲಾಗಿ ಕಳಪೆ ಮಟ್ಟದಿಂದ ಕಾಮಗಾರಿಗಳನ್ನು ನಿರ್ವಹಿಸಿರುವ ಸಾಕಷ್ಟು ಪುರಾವೆಗಳಿವೆ ಈಗಾಗಲೆ ಪೂರ್ಣಗೊಂಡಿರುವ ಕಾಮಗಾರಿಗಳನ್ನು ನಾನು ಖುದ್ದಾಗಿ ಪರಿಶೀಲಿಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತು ಕ್ರಮವಹಿಸಲು ಮತ್ತು ಸಂಬಂಧಿಸಿದ ಗುತ್ತಿಗೆದಾರರ ಪರವಾನಿಗೆಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಶೀಫಾರಸ್ಸು ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕ್ಷೇತ್ರದಲ್ಲಿ ಸುಮಾರು 190 ಗ್ರಾಮಗಳಲ್ಲಿ 250ಕ್ಕೂ ಹೆಚ್ಚು ಕಾಮಗಾರಿಯನ್ನು ಕೈಗೆತ್ತಿಕೊಂಡು ಜನರಿಗೆ ಶುದ್ಧ ಕುಡಿಯುವ ನೀರನ್ನು ಮನೆಮನೆಗೆ ತಲುಪಿಸಲು ಸರ್ಕಾರವು ಮಹತ್ವದ ಯೋಜನೆಯನ್ನು ರೂಪಿಸಿ ಅನುದನಾ ಬಿಡುಗಡೆಗೊಳಿಸಿ ಟೆಂಡರ್ ಕರೆದು ಗುತ್ತಿಗೆದಾರರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಬಹುತೇಕ ಕಾಮಗಾರಿಗಳು ಆರಂಬಿಸಿರುವುದಿಲ್ಲಾ, ಆರಂಭಿಸಿರುವ ಕಾಮಗಾರಿಗಳು ಕಳಪೆ ಸಾಮಗ್ರಿಗಳನ್ನು ಬಳಸಿ ಅಪೂರ್ಣವಾಗಿ ಕಾಮಗಾರಿಯನ್ನು ನಿರ್ಮಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಎಲ್ಲಾ ಕಾಮಗಾರಿಗಳ ಸ್ಥಳಕ್ಕೆ ನಾನು ಖುದ್ದಾಗಿ ಭೇಟಿನೀಡಿ ಪರಿಶೀಲಿಸಲಾಗುವುದು ಎಂದು ಎಚ್ಚರಿಸಿ ಮತ್ತು ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಗುತ್ತಿಗೆ ಪಡೆದು ಕಳಪೆ ಕಾಮಗಾರಿ ನಿರ್ವಹಿಸಿದ ಗುತ್ತಿಗೆದಾರರ ಪರವಾನಿಗೆಯನ್ನು ಕಪ್ಪುಪಟ್ಟಿಗೆ ಸೇರಿಸಲು ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.