ಅಧಿಕಾರಿ ‌ಮನೆ ಲೋಕಾಯುಕ್ತ ದಾಳಿ

0
47

ಕಲಬುರಗಿ: ಕೊಪ್ಪಳ‌ ಜಿಲ್ಲಾ ಭೂಸೇನಾ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಝಡ್.ಎಂ. ಚಿಂಚೋಳಿಕರ್ ಅವರಿಗೆ ಸೇರಿದ ನಿರ್ಮಾಣ ಹಂತದ ಮನೆಯ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಆದಾಯಕ್ಕಿಂತಲೂ ಹೆಚ್ಚು ಗಳಿಸಿದ ಆರೋಪ ಕೇಳಿ ಬಂದಿದ್ದರಿಂದ ಕಲಬುರಗಿ ಲೋಕಾಯುಕ್ತದ ಜಿಲ್ಲಾ ವರಿಷ್ಠಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆದಿದೆ.

Contact Your\'s Advertisement; 9902492681

ಎರಡು ಅಂತಸ್ತಿನ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಗುಜರಾತ್ ರಾಜ್ಯದ ಕಲ್ಲುಗಳನ್ನು ತರಿಸಲಾಗಿದೆ. ಕಟ್ಟಡದ ಮೌಲ್ಯ ಮಾಪನ ಮಾಡಬೇಕಿದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here