ಕಲಬುರಗಿ; ತಾಲೂಕಿನ ತಾಜ ಸುಲ್ತಾನಪೂರ ಹಾಗೂ ಕುಮಸಿ ಗ್ರಾಮ ಪಂಚಾಯಿತಿಗಳಲ್ಲಿ ಗುರುವಾರ ಕಲಬುರಗಿ ತಾಲೂಕ ಪಂಚಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣಾ ಕೌಲಗಿ ಇವರ ನೇತೃತ್ವದಲ್ಲಿ ನರೇಗಾ ಕೂಲಿಕಾರರ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಆರೋಗ್ಯ ಅಮೃತ ಅಭಿಯಾನದಡಿ ಗ್ರಾಮ ಪಂಚಾಯಿತಿಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ಸ್ಥಳದಲ್ಲಿಯೇ ಕೂಲಿ ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ, 691 ಮಹಿಳೆಯರು, 313 ಪುರುಷರು ಸೇರಿದಂತೆ ಒಟ್ಟು 1004 ಕೂಲಿ ಕಾರ್ಮಿಕರ ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆ ಮತ್ತಿತರ ಪರೀಕ್ಷೆಗಳನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಕೂಲಿಕಾರರು ತಮ್ಮ ದೇಹದ ಆರೋಗ್ಯ ಸಂರಕ್ಷಣೆಯಲ್ಲಿ ಉತ್ತಮ ಅಭ್ಯಾಸಗಳನ್ನು ರೂಡಿಸಿಕೊಳ್ಳಲು ತಿಳಿಸಲಾಯಿತು.
ಕಲಬುರಗಿ ತಾಲೂಕು ಪಂಚಾಯತ್‍ನ ಐಈಸಿ ಸಂಯೋಜಕ ಮೋಸಿನ ಖಾನ್ ಮತ್ತು ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಗ್ರಾಮ ಪಂಚಾಯಯ ಸಿಬ್ಬಂದಿ ವರ್ಗಗಳು ಉಪಸ್ಥಿತರಿದ್ದರು.