ನರೇಗಾ ಯೋಜನೆ ಹಣ ದುರಪಯೋಗ ತನಿಖೆಗೆ ರೈತ ಸಂಘ ಮನವಿ

0
26

ಸುರಪುರ: ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ 14 ಮತ್ತು 15ನೇ ಹಣಕಾಸು ಯೋಜನೆಯ ಹಣವನ್ನು ದುರುಪಯೋಗ ಮಾಡಿಕೊಂಡಿದ್ದು ತನಿಖೆ ನಡೆಸುವಂತೆ ಆಗ್ರಹಿಸಿ ನಗರದ ತಾಲೂಕು ಪಂಚಾಯತಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಮನವಿ ಸಲ್ಲಿಸಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಎಚ್.ಆರ್.ಬಡಿಗೇರ ಮಾತನಾಡಿ, ತಾಲೂಕಿನನಗನೂರ, ಕರಡಕಲ್, ಹೆಗ್ಗಣದೊಡ್ಡಿ, ಮಾಲಗತ್ತಿ, ಮಲ್ಲಾ (ಬಿ) ಸೇರಿದಂತೆ ಇನ್ನೂ ಅನೇಕ ಗ್ರಾಮ ಪಂಚಾಯತಿಗಳಲ್ಲಿ ಸರಕಾರ ದಿಂದ ವಿವಿಧ ಯೋಜನೆಗಳಾದ ನರೇಗಾ,ಎಸ್.ಬಿ.ಎಮ್,ಸ್ವಚ್ಛ ಭಾರತ ಅಭಿಯಾನ ಸೇರಿದಂತೆ ಇನ್ನಿತರ ಯೋಜನೆಗಳಡಿ ಬಂದಿದ್ದ ಕೋಟ್ಯಾಂತರ ರೂಪಾಯಿ ಅನುದಾನವನ್ನು ಪಂಚಾಯತಿಯಲ್ಲಿನ ಇತರೆ ಸಿಬ್ಬಂದಿಗಳ ಸಂಬಂಧಿಕರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿ ಲಪುಟಾಯಿಸಲಾಗಿದೆ.ಆದ್ದರಿಂದ ಕೂಡಲೇ ಈ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿನ ಅಕ್ರಮವನ್ನು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ತಾಲೂಕು ಪಂಚಾಯತಿಗೆ ಬೀಗ ಮುದ್ರೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

Contact Your\'s Advertisement; 9902492681

ನಂತರ ತಾಲೂಕು ಪಂಚಾಯತಿ ಸಿರಸ್ತೆದಾರರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಸಂಗಣ್ಣ,ಸದಾಶಿವ ದೊಡ್ಮನಿ,ಬಸವರಾಜ,ನಿಂಗನಗೌಡ,ಧನರಾಜ,ಜೆಟ್ಟೆಪ್ಪ,ದೇವರಾಜ ಹಾಗೂ ಕುಮಾರ ಬೋವಿ ಸೇರಿದಂತೆ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here