ಪ್ರತಿನಿತ್ಯ 42ಲಕ್ಷ ಮಹಿಳೆಯರಿಗೆ ‘ಶಕ್ತಿ ವರದಾನ: ಸಿಎಂ ಸಿದ್ದರಾಮಯ್ಯ

0
11

ಬೆಂಗಳೂರು; ಸರಕಾರಿ ಸಂಸ್ಥೆಗಳ ಸಾರಿಗೆ ಬಸ್‌ಗಳಲ್ಲಿ ಪ್ರತಿನಿತ್ಯ ಸುಮಾರು 41.85 ಸಾವಿರಕ್ಕೂ ಅಧಿಕ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಶಕ್ತಿ ಯೋಜನೆಯು ಈ ಎಲ್ಲ ಮಹಿಳೆಯರಿಗೆ ವರದಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ವಿಧಾನಸೌಧದದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,ದುಡಿಯುವ ಮಹಿಳೆಯರ ಉತ್ಸಾಹ ಹೆಚ್ಚಿಸಲಿದೆ. ಬಡ ಜನರಿಗೆ ನೀಡುವ ಅರ್ಥಿಕ ನೆರವು ನಾಡಿನ ಒಟ್ಟು ಅರ್ಥಿಕತೆಯ ವಿಕಸನಕ್ಕೆ ಕಾರಣವಾಗಲಿದೆ ಎಂಬ ಉದ್ದೇಶದಿಂದ ಈ ಯೋಜನೆ ಅನುಷ್ಠಾನ ಮಾಡಲಾಗಿದೆ ಎಂದರು.

Contact Your\'s Advertisement; 9902492681

ವಿದ್ಯುತ್ ದರ ಏರಿಕೆ ವಿಷಯದಲ್ಲಿ ಪ್ರತಿಪಕ್ಷಗಳು ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದೇವೆ. ದರ ಏರಿಕೆ ನಿರ್ಧಾರವು ಈ ಹಿಂದೆಯೇ ಆಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆಇಆರ್‌ಸಿ) ಸ್ವಾಯತ್ತತಾ ಸಂಸ್ಥೆಯಾಗಿದ್ದು, ಪ್ರತಿ ವರ್ಷ ವಿದ್ಯುತ್ ದರ ಪರಿಷ್ಕರಣೆ ಮಾಡುತ್ತದೆ. ಮೇ 12ರಿಂದ ಪರಿಷ್ಕೃತ ವಿದ್ಯುತ್ ದರ ಜಾರಿಗೆ ಬರಲು ಏ.1ರಂದು ಕೆಇಆರ್‌ಸಿ ಆದೇಶ ಹೊರಡಿಸಿತ್ತು ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here