ಆನೇಕಲ್: ತಾಲ್ಲೂಕಿನ ಆದಿಗೊಂಡನಹಳ್ಳಿ ಗ್ರಾಮದ ಹರೀಶ್ ರೆಡ್ಡಿ ರವರು ತಾವು ಓದಿದ ತಮ್ಮದೇ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕಗಳು ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು.
“ಕಳೆದ 16 ವರ್ಷಗಳಿಂದ ನಿರಂತರವಾಗಿ ಮಾಡುತ್ತಿರುವ ಶೈಕ್ಷಣಿಕ ಸೇವೆಯನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ಹರೀಶ್ ರೆಡ್ಡಿ ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀಮತಿ ವರಲಕ್ಷ್ಮಿ, ಲಯನ್ಸ್ ಕ್ಲಬ್ ಜೋನಲ್ ಚೇರ್ಪರ್ಸನ್ ದೇವರಾಜ್ ನಾಯ್ಕ, ಗಜವೇ ಸಂಸ್ಥಾಪಕ ಅಧ್ಯಕ್ಷರಾದ ವಿಜಯರಾಮ, ಶಾಲೆಯ ಶಿಕ್ಷಕರು ಹಾಜರಿದ್ದರು.