ಜೂ. 25 ದೊಡ್ಡಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿ ಪ್ರದಾನ

0
59

ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೊಧನಾ ಪರಿಷತ್ತು ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಸಮಾಜಮುಖಿಯಾಗಿ ಕಾರ್ಯವನ್ನು ನಿರ್ವಹಿಸುತ್ತ ಬಂದಿದ್ದು, ರಾಜ್ಯಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಅಲ್ಲದೆ ಮೇ 1 ಕಾರ್ಮಿಕ ದಿನಾಚರಣೆ ಅಂಗವಾಗಿ ನಮ್ಮ ಸಂಸ್ಥೆಯು ಕಾಯಕ ದಿನಾಚರಣೆಯನ್ನಾಗಿ ಆಚರಿಸುವುದರೊಂದಿಗೆ ಅಂದು ವಿವಿಧ ಕ್ಷೇತ್ರಗಳಲ್ಲಿ ಅತ್ಯಂತ ಶ್ರಮದ ಕಾಯಕವನ್ನು ನಿರ್ವಹಿಸುತ್ತ ಬಂದಿರುವ ಅನೇಕ ಸಾಧಕರನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ 43 ಜನರಿಗೆ ಕಾಯಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಜಿಲ್ಲಾಧ್ಯಕ್ಷ ರವೀಂದ್ರ ಶಾಬಾದಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ಶಿವರಂಜನ ಸತ್ಯಂಪೇಟೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜೂನ್ 25ರಂದು ಭಾನುವಾರ ಬೆಳಗ್ಗೆ 9.30ಕ್ಕೆ ದೊಡ್ಡಬಳ್ಳಾಪುರದ ಕೆ.ಎಂ.ಹೆಚ್ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದು ತೋಂಟದಾರ್ಯ ಮಠದ ನಿಜಗುಣ ಪ್ರಭು ತೋಂಟದಾರ್ಯ ಸ್ವಾಮಿಗಳ ಸಾನ್ನಿಧ್ಯ ವಹಿಸಲಿದ್ದು ಕರ್ನಾಟಕ ಸರ್ಕಾರದ ಆಹಾರ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Contact Your\'s Advertisement; 9902492681

ಭಾರತ ಸರ್ಕಾರದ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ವಿ.ಗೋಪಾಲಗೌಡರು ಪ್ರಶಸ್ತಿ ಪ್ರದಾನ ಮಾಡುವರು, ಸಂಸ್ಥೆಯ ರಾಜ್ಯಾಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ಅಧ್ಯಕ್ಷತೆ ವಹಿಸಲಿದ್ದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್, ಎನ್.ಬಿ.ಎಸ್.ಎಸ್ ನ ಅಧ್ಯಕ್ಷ ಡಾ.ಸೋಮಶೇಖರ್, ದೊಡ್ಡಬಳ್ಳಾಪುರ ಲಯನ್ಸ್ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಖ್ಯಾತ ಬರಹಗಾರ ಮಂಜುನಾಥ ಅದ್ದೆ, ಎಂ.ವಿ.ಭಾಸ್ಕರ್, ದೊಡ್ಡಬಳ್ಳಾಪುರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಸ್ಥೆಯ ಪ್ರಮುಖರಾದ ಡಾ.ಅಂಜನಪ್ಪ ಖ್ಯಾತ ವೈದ್ಯರು, ಡಾ.ಜಿ.ಎಸ್.ಶ್ರೀಧರ್ ತಿಪಟೂರು, ಹಂಪಿಕೆರೆ ರಾಜೇಂದ್ರ ಹೊಸಪೇಟೆ, ಎಸ್.ಕೆ.ಉಮೇಶ್, ಡಾ.ಜಿ.ಕೆ.ಸೌಮ್ಯಮಣಿ, ಇಂದುಮತಿ ಸಾಲಿಮಠ, ಬಿ.ಎಂ.ಇμರ್Áದ್ ಅಹಮದ್ ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.

ಕಾಯಕ ರತ್ನ ಪ್ರಶಸ್ತಿ: ಕಲಬುರಗಿಯ ಉಮೇಶ ಶೆಟ್ಟಿ, ಬೀದರ್ ನ ಬಿ.ವಿ.ಶಿವಪ್ರಸಾದ್, ಯಾದಗಿರಿಯ ಮಲ್ಲಿಕಾರ್ಜುನ ಸತ್ಯಂಪೇಟೆ ಅವರನ್ನು ಕೂಡ ಕಾಯಕ ರತ್ನ ಪ್ರಶಸ್ತಿಗೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸತ್ಕರಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here