ಜೇವರ್ಗಿಯಲ್ಲಿ ಬಾಲಕಾರ್ಮಿಕ ನಿರ್ಮೂಲನಾ ಜಾಥಾಕ್ಕೆ ಚಾಲನೆ

0
56

ಕಲಬುರಗಿ; ತಾಲೂಕಾಡಳಿತ, ತಾಲೂಕ ಕಾನೂನು ಸೇವಾ ಸಮಿತಿ, ತಾಲೂಕ ನ್ಯಾಯವಾದಿಗಳ ಸಂಘ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೂಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098/112, ಸಂಸ್ಕಾರ ಪ್ರತಿμÁ್ಠನ ಸಂಸ್ಥೆ, ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಕಲಬುರಗಿ ಹಾಗೂ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (ಖಐಊP) ಮೈಸೂರು ಇವುಗಳ ಸಂಯುಕ್ತಾಶ್ರಯದಲ್ಲಿ “ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ” ಅಂಗವಾಗಿ ಬಾಲಕಾರ್ಮಿಕ ನಿರ್ಮೂಲನಾ ಜಾಥಾ ಕಾರ್ಯಕ್ರಮವನ್ನು ಜೇವರ್ಗಿಯಲ್ಲಿ ಗುರುವಾರ ಹಮ್ಮಿಕೊಳ್ಳಲಾಯಿತು.

ಜೇವರ್ಗಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಸಂದೀಪ್ ನಾಯಕ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿ, “14 ವರ್ಷದೊಳಗಿನ ಬಾಲಕಾರ್ಮಿಕ ಮತ್ತು 18 ವರ್ಷದೊಳಗಿನ ಕಿಶೋರ ಕಾರ್ಮಿಕ ಮಕ್ಕಳನ್ನು ದುಡಿಸಿಕೊಳ್ಳುವುದು ಕಾನೂನಿನ ಶಿಕ್ಷಾರ್ಹ ಅಪರಾಧವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ದುಡಿಮೆಗೆ ಹಚ್ಚದೇ ಶಾಲೆಗೆ ಕಳುಹಿಸಬೇಕು. ಮಕ್ಕಳನ್ನು ದುಡಿಸಿಕೊಂಡ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪ್ರಕರಣಗಳು ದಾಖಲಿಸಲಾಗುತ್ತದೆ ಎಂದು ತಿಳಿಸಿದರು.

Contact Your\'s Advertisement; 9902492681

ಜೇವರ್ಗಿ ತಾಲೂಕ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಐ.ಸೂಗೂರ ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಸಹಾಯಕ ಸರ್ಕಾರಿ ಅಭಿಯೋಜಕ ಬಸಲಿಂಗಮ್ಮಾ, ಹಿರಿಯ ವಕೀಲ ಎಸ್.ಎ. ಪಾಟೀಲ್, ಜೇವರ್ಗಿ/ಕಲಬುರಗಿ ಕಾರ್ಮಿಕ ಇಲಾಖೆ ಹಿರಿಯ ಕಾರ್ಮಿಕ ನಿರೀಕ್ಷಕ ಕೆ.ಎಸ್. ಪ್ರಸನ್ನ, ಜೇವರ್ಗಿ ಸರ್ಕಾರಿ ಮೌಲಾನಾ ಆಜಾದ್ ಶಾಲೆಯ ಮುಖ್ಯಗುರು ಲಕ್ಷ್ಮೀ ಜಿ. ನಾಯಕ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೂಸೈಟಿ ಯೋಜನಾ ನಿರ್ದೇಶಕ ಸಂತೋμï ಕುಲಕರ್ಣಿ, ಸಂಸ್ಕಾರ್ ಪ್ರತಿμÁ್ಠನ ಸಂಸ್ಥೆಯ ನಿರ್ದೇಶಕ ವಿಠ್ಠಲ್ ಚಿಕಣಿ, ಕಲಬುರಗಿ ಎಸ್.ಎಸ್.ಎಲ್ ಕಾನೂನು ಮಹಾವಿದ್ಯಾಲಯದ ಚೈಲ್ಡ್ ಲೈನ್ ನೂಡಲ್ ಕೇಂದ್ರದ ಜಿಲ್ಲಾ ಸಂಯೋಜಕ ಬಸವರಾಜ್ ತೆಂಗಳಿ ಸೇರಿದಂತೆ ಮೌಲಾನಾ ಆಜಾದ್ ಶಾಲೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜೇವರ್ಗಿ ತಾಲೂಕ ನ್ಯಾಯಾಲಯದಿಂದ ಆರಂಭಗೊಂಡ ಈ ಜಾಥಾವು ಜೇವರ್ಗಿ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಯಿತು. ಆಟೋ ದ್ವನಿವರ್ಧಕ ಮೂಲಕ ಬಿತ್ತಿ ಪತ್ರಗಳು ಹಂಚುವುದರ ಮೂಲಕ “ಬಾಲಕಾರ್ಮಿಕ & ಕಿಶೋರ ಕಾರ್ಮಿಕ ಮಕ್ಕಳನ್ನು ದುಡಿಸಿಕೊಂಡಲ್ಲಿ ಮಾಲೀಕರುಗಳ ಮೇಲೆ 20,000 ರೂ. ರಿಂದ 50,000 ರೂ. ವರೆಗೂ ದಂಡ ಮತ್ತು 6 ತಿಂಗಳಿಂದ 2 ವರ್ಷಗಳ ವರೆಗೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಈ ಸಂದÀರ್ಭದಲ್ಲಿ ಜೇವರ್ಗಿ ತಾಲೂಕಿನ ವಕೀಲರ ಸಂಘದ ಪದಾಧಿಕಾರಿಗಳು, ಹಿರಿಯ ಮತ್ತು ಕಿರಿಯ ವಕೀಲರು, ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here