ಕಲಬುರಗಿ: ರಾಜು ಬಿ ಹಡಪದವರು ಸುಮಾರು 20 ವರ್ಷಗಳಿಂದ ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಸೇಡಂ ಸವಿತಾ ಸಮಾಜದ ತಾಲೂಕ ಅಧ್ಯಕ್ಷರಾಗಿ ಸಮಾಜದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮ ವಹಿಸಿರುತ್ತಾರೆ.
ಸವಿತಾ ಸಮಾಜದ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಜಿಲ್ಲಾ ಸವಿತಾ ಸಮಾಜ ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಮಹೇಶ್ ಉಜ್ಜೆಲೀಕರ್ ಅವರು ಸನ್ಮಾನ್ಯ ಶ್ರೀ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಶಾಸಕರ ಅನುದಾನದಲ್ಲಿ ಅಡಿಯಲ್ಲಿ ಸವಿತಾ ಭವನ ನಿರ್ಮಾಣ ಮಾಡಿರುತ್ತಾರೆ. ಜಿಲ್ಲಾ ಸವಿತಾ ಸಮಾಜ ಜಿಲ್ಲಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ ರಾಜಕೀಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂ ಡು ಸಕ್ರಿಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದು ಸೇಡಂ ಪುರಸಭೆಯ ನಾಮ ನಿರ್ದೇಶಕ ಸದಸ್ಯರಾಗಿ ಕಾಂಗ್ರೆಸ್ ಪಾರ್ಟಿಯ ಸೇಡಂ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುತ್ತಾರೆ.
ಅಸಂಘಟಿತ ಕಾರ್ಮಿಕರ ಸೇಡಂ ಬ್ಲಾಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ ಡಾ. ಶರಣಪ್ರಕಾಶ್ ಪಾಟೀಲ್ ಅಪ್ತರಾಗಿ ಕಾಂಗ್ರೆಸ್ ಪಾರ್ಟಿಯಲ್ಲಿ ಸೇವೆ ಸಲ್ಲಿಸುತ್ತಾ ಇರುವುದರಿಂದ ಕರ್ನಾಟಕ ರಾಜ್ಯ ಸವಿತಾ ಸಮಾಜದ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷನಾಗಿ ನೇಮಿಸಬೇಕೆಂದು ಉಜ್ಜೆಲೀಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.