ಕಲಬುರಗಿ: ವನಮಹೋತ್ಸವ ಅಂಗವಾಗಿ ಜಿಲ್ಲೆಯಾದ್ಯಂತ ಹಸರೀಕರಣ ಹೆಚ್ಚು ಮಾಡಲು ಇದೇ ಜುಲೈ 1 ರಿಂದ 7ರ ವರೆಗೆ ಕೋಟಿ ವೃಕ್ಷ ಅಭಿಯಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವಾರ್ ಸಿಂಗ್ ಮೀನಾ ಹೇಳಿದರು.
ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಅಭಿಯಾನದ ಅಂಗವಾಗಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕನಿಷ್ಟ 2200 ನೆಡಬೇಕು ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್, ಕೃಷಿ, ತೋಟಗಾರಿಕೆ, ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಿ.ಎಸ್.ರಾಠೋಡ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ ಇನಾಂದಾರ್, ಕೃಷಿ ಉಪನಿರ್ದೇಶಕ ಸೋಮಶೇಖರ ಬಿರಾದಾರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ಹೇಮಾ ಹಾಜರಿದ್ದರು.