ಬೆಂಗಳೂರು; ಜುಲೈ 03 ರಂದು ಬೆಂಗಳೂರಿಗೆ ಆಗಮಿಸಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿಲಾಗಿದ್ದ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಇಂದು ಬೆಳಿಗ್ಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೈದರಾಬಾದ್ಗೆ ಪ್ರಯಾಣಿಸಿದರು.
ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು. ಈ ಸಮಯದಲ್ಲಿ ಇಂಧನ ಇಲಾಖೆಯ ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್, ಕರ್ನಾಟಕ ಪೆÇಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೆÇಲೀಸ್ ಆಯುಕ್ತರಾದ ಬಿ. ದಯಾನಂದ್, ರಕ್ಷಣಾ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.