ಸುರಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಯಾದಗಿರಿ ಹಾಗೂ ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಸುರಪುರ ಹಾಗೂ ಬೆಂಗಳೂರು/ಹಿಂದುಪುರನ ಜನಹಿತ ಐಕೇರ ಸೆಂಟರ್‍ನ ಡಾ.ಕೃಷ್ಣಮೋಹನ ಜಿಂಕಾ ಇವರ ತಂಡದ ವತಿಯಿಂದ ಇಂದು(ಶನಿವಾರ) ಮತ್ತು ನಾಳೆ(ರವಿವಾರ) ಎರಡು ದಿನ ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಬೃಹತ್ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ತಿಳಿಸಿದ್ದಾರೆ.
ಶಿಬಿರಕ್ಕೆ ಬರುವ ಫಲಾನುಭವಿಗಳು ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ. ಆಧಾರ ಕಾರ್ಡ ಜೆರಾಕ್ಸ್ ಪತ್ರಿಗಳನ್ನು ಕಡ್ಡಾಯವಾಗಿ ತರಬೇಕು ಎಂದು ಅವರು ತಿಳಿಸಿದ್ದಾರೆ.ಎರಡು ದಿನಗಳ ಕಾಲ ನಡೆಯುವ ಶಿಬಿರದಲ್ಲಿ ಸುರಪುರ ಮತ್ತು ಹುಣಸಗಿ ತಾಲೂಕಿನ ಸಾರ್ವಜನಿಕರು ಶಿಬಿರಕ್ಕೆ ಆಗಮಿಸಿ ನೇತ್ರ ತಪಾಸಣೆಗೆ ಒಳಗಾಗಬಹುದು,ನೇತ್ರ ಶಸ್ತ್ರ ಚಿಕಿತ್ಸೆ ಅಗತ್ಯ ಇರುವವರಿಗೆ ಚಿಕಿತ್ಸೆಯನ್ನು ನೆರವೇರಿಸಲಾಗುವುದು.ಆದ್ದರಿಂದ ಎರಡೂ ತಾಲೂಕಿನ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದ್ದಾರೆ.