ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವಿನ ಪ್ರಕರಣ: ನಿಷ್ಪಕ್ಷ ತನಿಖೆಗೆ ಸಿಎಂ ಸೂಚನೆ

0
163

ರಾಯಚೂರು: ನವೋದಯ ಇಂಜಿನಿಯರಿಂಗ್ ಕಾಲೇಜಿನ‌ ಮಧು ಪತ್ತಾರ್ (23) ಎಂಬ ವಿದ್ಯಾರ್ಥಿನಿ ಕಳೆದ ಶನಿವಾರ 13 ರಂದು  ಕಾಣೆಯಾಗಿದ್ದಳು. ಮಂಗಳವಾರ ಅಂದರೆ 16 ರಂದು ನೇಣು ಬಿಗಿದ ಸ್ಥಿತಿ ಮತ್ತು ಸುಟ್ಟ ಗಾಯದ ಸ್ಥಿಯಲ್ಲಿ ಶವ ಪತ್ತೆಯಾಗಿದೆ.  ರಾಯಚೂರಿಂದ ಸುಮಾರು 4 ಕಿ.ಮೀ. ದೂರದಲ್ಲಿರುವ ಮಾಣಿಕ ಪ್ರಭು ದೇವಸ್ಥಾನದ ಸಿಕ್ಕಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನದ ಆಧಾರದ ಮೇಲೆ ಸುದರ್ಶನ್ ಎಂಬ ಯುವಕನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.ಇನ್ನೂ ಎರಡು ದಿನಗಳ‌ ನಂತರ ಮರಣೋತ್ತರ ಪರೀಕ್ಷೆಯ ವರದಿ ಬಂದ‌ ನಂತರ ಸ್ಪಷ್ಟತೆ ಸಿಗಲಿದೆ ಎಂದು ಎಸ್ಪಿ ಡಿ.ಕಿಶೋರ್ ಬಾಬು ತಿಳಿಸಿದ್ದಾರೆ.

Contact Your\'s Advertisement; 9902492681

ಮುಖ್ಯಮಂತ್ರಿ ಕುಮಾಸ್ವಾಮಿ ಪ್ರಕರಣದ ಬಗ್ಗೆ ವಿಷಾದ ವ್ಯಕ್ತ ಪಡೆಸಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ  ಟ್ವೀಟ್ ಮಾಡಿ ಅಧಿಕಾರಿಗಳಿಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಟ್ವೀಟ್ 1:
“ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಪ್ರಕರಣ ಅತೀವ ನೋವು ತಂದಿದೆ. ಈ ಪ್ರಕರಣದ ಕುರಿತು ರಾಯಚೂರು ಎಸ್ ಪಿ ಯವರಿಂದ ಮಾಹಿತಿ ಪಡೆದಿದ್ದು ಒಬ್ಬನನ್ನು ಬಂಧಿಸಿದ್ದು ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ”

ಟ್ವೀಟ್ 2:
ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಆಕೆಯ ಹೆತ್ತವರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ಕೊಡಲಿ. ಹೆಣ್ಣುಮಕ್ಕಳ ಮೇಲಿನ ಇಂತಹ ಪೈಶಾಚಿಕ ಕೃತ್ಯ ಖಂಡನೀಯ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here