ಕಲಬುರಗಿ: ರಾಜ್ಯದ ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಸರಕಾರದ ವಿವಿಧ ವೈಫಲ್ಯಗಳನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ರಾಜಕುಮಾರ ಪಾಟೀಲ ತೇಲ್ಲೂರ, ಶಿವರಾಜ ಪಾಟೀಲ ರದ್ದೇವಾಡಗಿ, ಸಿದ್ದಾಜಿ ಪಾಟೀಲ, ಬಸವರಾಜ ಮತ್ತಿಮಡು ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.