ಫಸಲ್ ಬಿಮಾ ಯೋಜನೆ ಅನುಷ್ಠಾನಕ್ಕೆ ಸರಕಾರ ಮಂಜೂರಾತಿ

0
16

ಸುರಪುರ : 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಅನುಷ್ಠಾನಗೊಳಿಸಲು ಸರಕಾರ ಮಂಜೂರಾತಿ ನೀಡಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುನಾಥ ಭೂಸನೂರೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಫ್ಯೂಚರ್ ಜನರಾಲಿ ಇಂಡಿಯಾ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಸಂಸ್ಥೆಗೆ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

Contact Your\'s Advertisement; 9902492681

ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಬ್ಯಾಂಕ್‍ಗಳಿಗೆ ಫೋಷಣೆಗಳನ್ನು ಸಲ್ಲಿಸಲು ಅಂತಿಮ ದಿನಾಂಕ ನಿಗದಿಪಡಿಸಲಾಗಿದೆ. ಭತ್ತ (ನೀರಾವರಿ, ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ) ಬೆಳೆಗಳಿಗೆ ವಿಮಾ ಕಂತು ತುಂಬುವ ಕೊನೆ ದಿನ ಆಗಸ್ಟ್ 16, ತೊಗರಿ (ನೀರಾವರಿ), ಹೆಸರು (ಮಳೆಯಾಶ್ರಿತ), ಹತ್ತಿ, ಸೂರ್ಯಕಾಂತಿ, ಸಜ್ಜೆ (ನೀರಾವರಿ ಮತ್ತು ಮಳೆಯಾಶ್ರಿತ) ಬೆಳೆಗಳಿಗೆ ಜುಲೈ 31 ಕೊನೆ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚಿತ ಎಲ್ಲ ಬೆಳೆಗಳ ಆಯ್ಕೆಗಾಗಿ ಸಹಾಯವಾಣಿ 18002677984 ಅಥವಾ ಸಮೀಪದ ಬ್ಯಾಂಕ್‍ಗಳಿಗೆ, ರೈತ ಸಂಪರ್ಕ ಕೇಂದ್ರ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ. ಫ್ಯೂಚರ್ ಜನರಾಲಿ ಇಂಡಿಯಾ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಸಂಸ್ಥೆಯ ಪ್ರತಿನಿಧಿಗಳಾದ ಸುರಪುರ ತಾಲೂಕಿನಲ್ಲಿ ಶಿವಮೂರ್ತಿ (8867385744), ಹುಣಸಗಿ ತಾಲೂಕಿನಲ್ಲಿ ಚಂದ್ರಶೇಖರ (9611682356) ಸಂಪರ್ಕಿಸುವಂತೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here