ಅಫಜಲಪುರ; ಪ್ರಾಥಮಿಕ ಆರೋಗ್ಯ ಕೇಂದ್ರ ಗೊಬ್ಬುರ್ ಬಿ ಸಭಾಂಗಣದಲ್ಲಿ ಆಶಾ ಕಾರ್ಯಕರ್ತರ ಮಾಸಿಕ ಸಭೆ ಜರುಗಿತು. ಇದೇ ಸಂದರ್ಭದಲ್ಲಿ ಸದ್ಭಾವನ ದಿನದ ಪ್ರತಿಜ್ಞೆಯನ್ನು ಬೋಧಿಸಲಾಯಿತು.
ತದನಂತರ ವಿಶ್ವ ಸೊಳ್ಳೆ ದಿನ ಕುರಿತು ಮಾಹಿತಿ ನೀಡಿ ಪ್ರಸ್ತುತವಾಗಿ ಸೊಳ್ಳೆಗಳಿಂದ ಹರಡುವ ರೋಗಗಳಾದ ಮಲೇರಿಯಾ, ಡೆಂಗೀ, ಚಿಕನ್ ಗುನ್ಯಾ, ಮೆದುಳು ಜ್ವರ, ಆನೆಕಾಲು ರೋಗ ನಮ್ಮ ಜಿಲ್ಲೆಗಳಲ್ಲಿ ಪ್ರಮುಖವಾಗಿ ಸಾರ್ವಜನಿಕರಿಗೆ ಕಾಡುತ್ತಿದ್ದು ಈ ನಿಟ್ಟಿನಲ್ಲಿ ಸದ್ಭಾವನಾ ದಿನದ ಪ್ರತಿಜ್ಞೆ ಜೊತೆಗೆ ಸೊಳ್ಳೆಗಳಿಂದ ಹರಡುವ ರೋಗಗಳನ್ನು ನಿಯಂತ್ರಿಸುವಲ್ಲಿ ಮುಂಜಾಗ್ರತೆಯ ಬಗ್ಗೆ ಜಾಗೃತಿ ಮೂಡಿಸುತ್ತೇವೆಂದು ಈ ಸಂದರ್ಭದಲ್ಲಿ ಪಣತೊಡೋಣ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಬಳೆ ಮಾಹಿತಿ ನೀಡಿದರು.
ತದನಂತರ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಾಲಯ ಕಲ್ಬುರ್ಗಿಯಿಂದ ಆಗಮಿಸಿದ ಸಿದ್ಧಾರೂಢ ಸಂಗೊಳ್ಳಿ ಗಿ ಅವರು ವಿಶ್ವ ಸೊಳ್ಳೆ ದಿನಗಳ ಆಚರಣೆಯ ಮಹತ್ವ ಹಾಗೂ ಸೊಳ್ಳೆಗಳಿಂದ ಹರಡುಬಹುದಾದ ರೋಗಗಳು ಅವುಗಳ ನಿಯಂತ್ರಣ ಮತ್ತು ಮುಂಜಾಗ್ರತೆ ಕುರಿತು ಸುಧೀರ್ಘವಾಗಿ ಸಭೆಯಲ್ಲಿ ಮಾಹಿತಿ ನೀಡಿದರುನಂತರ ಜಿಲ್ಲಾ ಕುಷ್ಟರೋಗ ನಿರ್ಮೂಲನ ಕಾರ್ಯಾಲಯದ ಮೇಲ್ವಿಚಾರಕರಾದ ಮಲ್ಲಿಕಾರ್ಜುನ್ ಗುಂಡ ದ, ಆನಂದ್ ರಾಷ್ಟ್ರೀಯ ಕುಷ್ಟರೋಗ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ವೈದ್ಯಧಿಕಾರಿಗಳಾದ ಡಾ. ವಿನಯ್ ಗೋಲಗೆರೆ, ಡಾ. ಸುಷ್ಮಾ, ಡಾ. ದೇವರಾಜ್ಎಸ್ ಪ್ರಸಾದ್, ಡಾ. ವಿಜಯ, ಪ್ರಾಥಮಿಕ ಅರೋಗ್ಯ ಸುರಕ್ಷಣಾಧಿಕಾರಿಗಳು , ಆರೋಗ್ಯ ನಿರೀಕ್ಷಣಾಧಿಕಾರಿಗಳು , ಮತ್ತು ಸಮುದಾಯ ಅರೋಗ್ಯ ಅಧಿಕಾರಿಗಳು, ಎಲ್ಲ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.