ಎನ್‍ಇಪಿ-2020 ರದ್ದು: ಎಐಎಸ್‍ಇಸಿ ಸ್ವಾಗತ

0
29

ವಾಡಿ: ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್‍ಇಪಿ) ರಾಜ್ಯ ಸರ್ಕಾರ ರದ್ದುಗೊಳಿಸಿದ ಕ್ರಮವನ್ನು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ವೀರಭದ್ರಪ್ಪ (ಎಐಎಸ್‍ಇಸಿ) ಸ್ವಾಗತಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡುವ ಮೂಲಕ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಉಪಾಧ್ಯಕ್ಷ ವೀರಭದ್ರಪ್ಪ ಆರ್.ಕೆ, ವೈಜ್ಞಾನಿಕ ಕಲಿಕೆಗೆ ಮಾರಕವಾದ, ಕಾಪೆರ್Çರೇಟ್ ಪರವಾದ ಹಾಗೂ ತಾರತಮ್ಯದಿಂದ ಕೂಡಿರುವ ಎನ್‍ಇಪಿ ವಿರುದ್ಧ ಶಿಕ್ಷಣ ತಜ್ಞರು ಹಾಗೂ ರಾಜ್ಯದ ಜನತೆ ಬೆಳೆಸಿದ ಹೋರಾಟಕ್ಕೆ ಕರ್ನಾಟಕ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

Contact Your\'s Advertisement; 9902492681

ಭಾರತದ ನವೋದಯದ ಚಿಂತಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಆಶಯಗಳಾದ ವೈಜ್ಞಾನಿಕ, ಧರ್ಮನಿರಪೇಕ್ಷ ಮತ್ತು ಜನತಾಂತ್ರಿಕ ಮೌಲ್ಯಗಳಿಗೆ ಬದ್ಧವಾದ ಹಾಗೂ ಸಾರ್ವತ್ರಿಕ ಶಿಕ್ಷಣವನ್ನು ಖಾತ್ರಿಪಡಿಸುವ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸುವ ಮೂಲಕ ಸರ್ಕಾರ ಬದ್ಧತೆ ಮೆರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕಕ್ಕೆ ಜನಪರ ಶಿಕ್ಷಣ ನೀತಿಯನ್ನು ರೂಪಿಸಲು ನಿಷ್ಪಕ್ಷಪಾತವಾಗಿರುವ ಹಾಗೂ ಶಿಕ್ಷಣಕ್ಕೆ ಬದ್ಧವಾಗಿರುವ ಶಿಕ್ಷಣ ತಜ್ಞರು, ಪ್ರಾಧ್ಯಾಪಕರು, ಸಾಹಿತಿಗಳು, ವಿಜ್ಞಾನಿಗಳು ಹಾಗೂ ವಿದ್ಯಾರ್ಥಿ-ಪೋಷಕರನ್ನು ಒಳಗೊಂಡ ಒಂದು ಜನತಾಂತ್ರಿಕ ಸಮಿತಿಯನ್ನು ತಕ್ಷಣವೇ ರಚಿಸಬೇಕು. ಈ ಸಮಿತಿಯು ವ್ಯಾಪಕ  ಜನತಾಂತ್ರಿಕ ಚರ್ಚೆಗಳ ಮೂಲಕ ಜನಪರ ಶಿಕ್ಷಣ ನೀತಿಯನ್ನು ರೂಪಿಸಲು ಮುಂದಾಗಬೇಕು.

ಕುವೆಂಪು, ಬಿಎಂಶ್ರೀ ಮುಂತಾದವರ ಆಶಯಗಳಾದ ಧರ್ಮನಿರಪೇಕ್ಷ, ವೈಜ್ಞಾನಿಕ, ಜನತಾಂತ್ರಿಕ ಮೌಲ್ಯಗಳು ಹಾಗೂ ಸಮಾನತೆ, ಸಹಬಾಳ್ವೆ ಚಾರಿತ್ರ್ಯವನ್ನು ಬೆಳೆಸುವಂತಹ ಪಠ್ಯಪುಸ್ತಕಗಳು ರಚನೆಯಾಗಬೇಕು. ಮುಂಬರುವ ರಾಜ್ಯ ಶಿಕ್ಷಣ ನೀತಿಯು, ಶಿಕ್ಷಣದ ವ್ಯಾಪಾರೀಕರಣ ಹಾಗೂ ಶುಲ್ಕ ಏರಿಕೆಯನ್ನು ತಡೆಗಟ್ಟಬೇಕು. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿಗೊಳಿಸಬೇಕು ಎಂದು ವೀರಭದ್ರಪ್ಪ ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here