ಚಂದ್ರನ ಚುಂಬಿಸಿದ ಭಾರತ- ಶಾಸಕ ಅಲ್ಲಂಪ್ರಭು ಪಾಟೀಲ್ ಸಂತಸ

0
16

ಕಲಬುರಗಿ; ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ-3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿe್ಞÁನಿಗಳು ಹಾಗೂ ಸಿಬ್ಬಂದಿಗೆ ಕಲಬುರಗಿ ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಂಪ್ರಭು ಪಾಟೀಲ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿz್ದÁರೆ.

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ. ಆ ಮೂಲಕ ಚಂದ್ರಗ್ರಹದ ಮೇಲೆ ಭಾರತದ ಹೆಗ್ಗುರುತು ಮೂಡಿದೆ. ಇದಕ್ಕಾಗಿ ಅವಿರತ ಶ್ರಮಿಸಿದ ಇಸ್ರೋ ಸಂಸ್ಥೆಗೆ ಶುಭಾಶಯಗಳು. ಇಸ್ರೋ ಸಂಸ್ಥೆ ಈವರೆಗೂ ಮೂರು ಚಂದ್ರಯಾನ ಯೋಜನೆ ಯಶಸ್ವಿಗೊಳಿಸಿರುವುದು ದೊಡ್ಡ ಸಾಧನೆಯೇ ಸರಿ. ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ 3 ಯಶಸ್ವಿಯಾಗಿರುವುದು ಇಡೀ ದೇಶವೇ ಹೆಮ್ಮೆಪಡುವ ವಿಚಾರ. ಈ ಯೋಜನೆ ಯಶಸ್ಸಿನ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದೆ ಎಂದು ಅಲ್ಲಂಪ್ರಭು ಕೊಂಡಾಡಿದ್ದಾರೆ.

Contact Your\'s Advertisement; 9902492681

1960ರ ದಶಕದ¯್ಲÉೀ ದೇಶದ ರಾಕೆಟ್ ಮ್ಯಾನ್ ವಿಕ್ರಂ ಸಾರಾಭಾಯಿ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ದೂರದೃಷ್ಟಿ ಇಸ್ರೋ ಸಂಸ್ಥೆಗೆ ಬುನಾದಿ ಹಾಕಿತ್ತು. ಅಂದು ಅವರು ಬಿತ್ತಿದ ಬೀಜ ಇದು ವಿಶ್ವದ¯್ಲÉೀ ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಹೆಮ್ಮರವಾಗಿ ಬೆಳೆದಿದೆ ಎಂದು ಅಲ್ಲಂಪ್ರಭು ಪಾಟೀಲ್ ತಮ್ಮ ಹೇಳಿಕೆಯಲ್ಲಿ ಸಂತಸ ಹೊರಹಾಕಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here