ಕಲಬುರಗಿ; ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಅಂಧತ್ವ ವಿಭಾಗ ವತಿಯಿಂದ ಆಶಾ ಕಿರಣ ಅಭಿಯಾನದ ಸಮಗ್ರ ನೇತ್ರ ತಪಾಸಣೆ ಮತ್ತು ನೇತ್ರ ಶಸ್ತ್ರ ಚಿಕಿತ್ಸೆ ಅಭಿಯಾನ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಭಂವರ್ ಸಿಂಗ್ ಮೀನಾ ಅವರು ದೀಪಾ ಬೆಳಗುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಡಾ. ರಾಜಶೇಖರ ಮಾಲಿ. ಜಿಮ್ಸ್ ಹೆಚ್ ಓ ಡಿ, ಡಾ. ರಾಜೇಶ್ವರಿ. ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಜಕುಮಾರ ಕುಲಕರ್ಣಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು ಡಾ. ಶಿವಶರಣಪ್ಪ ಭೂಸನೂರ, ಜಿಲ್ಲಾ ಕಾಲರ ನಿಯಂತ್ರಣಾಧಿಕಾರಿ ಡಾ. ವಿವೇಕಾನಂದ ರೆಡ್ಡಿ, ಸಿಡಿಪಿಓ ಭೀಮರಾವ್ ಕಲ್ಲೂರ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಹಿರಿಯ ವೈದ್ಯಾಧಿಕಾರಿ ಡಾ. ವಿಜಯಲಕ್ಷ್ಮಿ ವಲ್ಯಾಪುರೆ ಹಾಗೂ ವಿವಿಧ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಮತ್ತು ಮಹಿಳಾ ಮತ್ತು ಅಭಿವೃದ್ಧಿ ಅಧಿಕಾರಿಯವರು ಭಾಗವಹಿಸಿದ್ದರು.