ಸೆ. 11 ರಂದು “ಸ್ಫೂರ್ತಿ ಕಿರಣ” ವಿಶೇಷ ಉಪನ್ಯಾಸ

0
22

ಕಲಬುರಗಿ: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಹಾಗೂ ಉಪನ್ಯಾಸಕರ ಸಂಘದಿಂದ ಸೆ.೧೧ರಂದು ಬೆಳಗ್ಗೆ ೧೦ಕ್ಕೆ ನಗರದ ಡಾ.ಎಸ್.ಎಂ.ಪಂಡಿತರಂಗ ಮಂದಿರದಲ್ಲಿ ಜಗತ್ತಿನ ಅತ್ಯಂತ ಕಿರಿಯ ಮುಖ್ಯೋಪಾಧ್ಯಾಯರಾದ ಬಾಲಿ ಅಲಿ ಅವರಿಂದ ಪಿಯುಸಿ ವಿದ್ಯಾರ್ಥಿಗಳಿಗಾಗಿ “ಸ್ಫೂರ್ತಿ ಕಿರಣ” ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಸಂಘದ ಅಧ್ಯಕ್ಷ ಅರುಣಕುಮಾರ ಪಾಟೀಲ್ ತಿಸಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಪಿಯುಸಿ ವಿದ್ಯಾರ್ಥಿಗಳು ಅಷ್ಟೇ ಅಲ್ಲ ಪ್ರೌಢ ಶಾಲಾ ವಿದ್ಯಾರ್ಥಿಗಳು, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಮುಕ್ತ ಅವಕಾಶ ಇದೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

Contact Your\'s Advertisement; 9902492681

ಪಶ್ಚಿಮ ಬಂಗಾಳದ ಜಗತ್ತಿನ ಅತ್ಯಂತ ಕಿರಿಯ ಮುಖ್ಯೋಪಾಧ್ಯಾಯ ಬಾಬರ ಅಲಿ ಉಪನ್ಯಾಸ ನೀಡಲಿದ್ದಾರೆ. ಡಿಡಿಪಿಯು ಶಿವಶರಣಪ್ಪ ಮುಳೆಗಾಂವ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಜೆ.ಮಲ್ಲಪ್ಪ, ದಿಶಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಾನಂದ ಖಜೂರ್ಗಿ, ಅಲ್ ಶಾರೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಗುಲಾಮ ರಬ್ಬಾನಿ, ಎಸ್.ಜಿ.ಎನ್.ಪ.ಪೂ.ಕಾಲೇಜು ಸಂಸ್ಥಾಪಕ ಶಿವರಾಜ ಶೀಲವಂತ, ಶಿವಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಎಸ್.ಹಂಚನಾಳ, ಶೀಗುರು ಪದವಿ ಪೂರ್ವ ಕಾಲೇಜು ಕಾರ್ಯದರ್ಶಿ ನಿತಿನ್ ನಾಯಕ, ಆರ್.ಜೆ.ಪದವಿ ಪೂರ್ವ ಕಾಲೇಜು ಪ್ರಚಾರ್ಯ ಡಾ.ಪ್ರಲ್ಹಾದ್ ಭುರ್ಲಿ, ಪ್ರಚಾರ್ಯ ಜೆ.ಶೇಖ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪ್ರಾಚಾರ್ಯ ಅರುಣಕುಮಾರ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಜೆ.ಮಲ್ಲಪ್ಪ, ಮಹ್ಮದ್ ಅಲ್ಲಾವುದ್ದೀನ್ ಸಾಗರ, ಬಸವರಾಜ ಬಿರಾಜದಾರ್ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here