ಶಹಾಬಾದ: ತಾಲೂಕಿನ ಶಾಲಾ-ಕಾಲೇಜು ಹಾಗೂ ಸರಕಾರಿ ಕಚೇರಿಗಳಲ್ಲಿ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಡ್ಡಾಯವಾಗಿ ಸಂವಿಧಾನ ಪೀಠಿಕೆ ವಾಚಿಸುವುದು ಹಾಗೂ ಪ್ರತಿಜ್ಞೆ ಸ್ವೀಕರಿಸಬೇಕೆಂದು ತಾಲೂಕಾ ತಹಸೀಲ್ದಾರ ಗುರುರಾಜ ಸಂಗಾವಿ ತಿಳಿಸಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಬೆಳಗ್ಗೆ ಪ್ರಾರ್ಥನೆ, ರಾಷ್ಟ್ರಗೀತೆ ನಂತರ ಸಂವಿಧಾನದ ಪೀಠಿಕೆ ಓದುವುದು ಕಡ್ಡಾಯವಾಗಿದ್ದು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜು, ಮತ್ತು ಸರಕಾರಿ ಕಚೇರಿಗಳಲ್ಲಿ ಪಾಲನೆ ಮಾಡಿ ವರದಿ ನೀಡಬೇಕೆಂದು ತಿಳಿಸಿದ್ದಾರೆ.