ಶಹಾಬಾದ: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪೆÇ್ರೀತ್ಸಾಹಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಸಮೂಹ ಸಂಪನ್ಮೂಲ ಅಧಿಕಾರಿ ಸತ್ಯನಾರಾಯಣ ಹೇಳಿದರು.
ಅವರು ಬುಧವಾರ ನಗರದ ಸೇಂಟ್ ಥಾಮಸ್ ಶಾಲೆಯಲ್ಲಿ ನಡೆದ ಶಹಾಬಾದ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ, ಮಕ್ಕಳ ಮೇಳ, ಕ್ರಿಡಾ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಾಕಾರದ ಪ್ರತಿಭೆಯನ್ನು ತೋರಿ ಸಾಂಸ್ಕøತಿಕವಾಗಿ ಮುಂದೆ ಬರಬೇಕು.ಅಲ್ಲದೇ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.
ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಸಿದ್ರಾಮ ಉದಯಕರ ಮಾತನಾಡಿ, ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸವಾರ್ಂಗೀಣ ಬೆಳವಣಿಗೆ ಸಾಧಿಸಲು ಅವಕಾಶ ಕಲ್ಪಿಸಬೇಕು. ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದರು.
ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ಮಾತನಾಡಿ, ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಗಳು ಪಠ್ಯದ ಜೊತೆಗೆ ಮಕ್ಕಳಿಗೆ ಅವಶ್ಯಕವಾಗಿದೆ. ಎಲ್ಲ ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಹೊರಹಾಕಲು ಈ ವೇದಿಕೆ ಅನುಕೂಲವಾಗಲಿದೆ ಎಂದರು.
ನಗರಸಭೆ ಸದಸ್ಯರಾದ ಸಾಬೇರಾಬೇಗಂ ಉದ್ಘಾಟಿಸಿದರು. ಸಮಾರಂಭದಲ್ಲಿ ಫಾದರ್ ಜೆರಾಲ್ಡ್ ಸಾಗರ ದಿವ್ಯಾ ಸಾನಿಧ್ಯ ವಹಿಸಿಕೊಂಡಿದ್ದರು, ಅತಿಥಿಗಳಾಗಿ ಎಮಸಿಸಿ ಶಾಲೆಯ ಪ್ರಾಚಾರ್ಯರಾದ ಸಿಸ್ಟರ್ ಲಿನೇಟ್, ಅಪ್ಪಾರಾವರಾವ ಪಾಟೀಲ, ಸಿಆರ್‍ಪಿ ಶರಣಬಸಪ್ಪ ಪಾಟೀಲ, ವಿಜಯಲಕ್ಷ್ಮಿ ಪಾಟೀಲ, ಜಿ.ಪಿ.ಎಸ್ ಶಾಲೆಯ ಮುಖ್ಯಗುರು ಹೊನ್ನಪ್ಪ, ಸೇಂಟ್ ಥಾಮಸ್ ಶಾಲೆಯ ಮುಖ್ಯಗುರುಮಾತೆ ಸಿಸ್ಟರ್ ಅನಸ್ತಿಸಿಯಾ ಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದರು.
ಮಹೇಶ್ವರಿ ಮತ್ತು ರೂಪಾ ನಿರೂಪಿಸಿದರು, ನಂದಿನಿ ಸ್ವಾಗತಿಸಿದರು, ಇಮ್ಯಾನುವೆಲ್ ಜಾನಪಾಲ್ ವಂದಿಸಿದರು.