ಸಚಿವ ಸಂಪುಟದಲ್ಲಿ ಕಲಬುರ್ಗಿ ಜಿಲ್ಲಾ ಪ್ರಾತಿನಿಧ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

0
58

ಕಲಬುರಗಿ: ರಾಜ್ಯ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡಿಲ್ಲ ಎಂದು ಆರೋಪಿಸಿ ಶನಿವಾರ ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಿದರು.
ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಚಿನ್ ಎಸ್. ಫರತಾಬಾದ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಖಾಜಾಪಾಶಾ ಬಾಗವಾನ್, ಸುರೇಶ್ ಚಿನಗುಂಡಿ, ರವಿಕುಮಾರ್ ಡೊಂಗರಗಾಂವ್, ಅಂಬು ಮಸ್ಕಿ, ಪ್ರೇಮ್, ಸುನೀಲ್ ಜಾಧವ್, ಲಾಲುಪ್ರಸಾದ್, ರಾಹುಲ್, ಹವೇಶ್ ಬಾಗವಾನ್, ರಹಿಮಾನ್, ಗುಡು ಪಟೇಲ್, ಶೇಖ್ ಅಹ್ಮದ್, ಇಜಾಜ್, ಜಾವಿದ್ ಮುಂತಾದವರು ಪಾಲ್ಗೊಂಡಿದ್ದರು.

ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿ, ರಾಜ್ಯ ಸಚಿವ ಸಂಪುಟ ರಚನೆಯಲ್ಲಿ ಜಿಲ್ಲೆಯನ್ನು ಕೈಬಿಡಲಾಗಿದೆ. ಜಿಲ್ಲೆಯಲ್ಲಿ ಬಿಜೆಪಿಯಿಂದ ಐವರು ಶಾಸಕರು ಹಾಗೂ ಓರ್ವ ವಿಧಾನ ಪರಿಷತ್ ಸದಸ್ಯರು ಆಯ್ಕೆಯಾಗಿದ್ದಾರೆ. ಆದಾಗ್ಯೂ, ಒಬ್ಬರಿಗೂ ಸಚಿವ ಸ್ಥಾನ ನೀಡದೇ ಇರುವುದು ಮಲತಾಯಿ ಧೋರಣೆಯಾಗಿದೆ ಎಂದು ಟೀಕಿಸಿದರು.

Contact Your\'s Advertisement; 9902492681

ಬೇರೆ ಜಿಲ್ಲೆಯವರಿಗೆ ಸಚಿವ ಸ್ಥಾನ ಕೊಟ್ಟರೆ ಕಲಬುರ್ಗಿ ಜಿಲ್ಲೆ ಅಭಿವೃದ್ಧಿ ಆಗುವುದಾದರೂ ಹೇಗೆ? ಜಿಲ್ಲೆಯಲ್ಲಿ ಆಯ್ಕೆಯಾದ ಶಾಸಕರನ್ನೇ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು. ಸ್ಥಳೀಯ ಶಾಸಕರಿಗೆ ಎಲ್ಲ ಮಾಹಿತಿ ಇರುತ್ತದೆ. ಸಚಿವರ ಪಟ್ಟಿಯಲ್ಲಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ್ ಪಾಟೀಲ್ ರೇವೂರ್ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದಾಗ್ಯೂ, ಕೊನೆ ಘಳಿಗೆಯಲ್ಲಿ ಕೈಬಿಡಲಾಗಿದೆ. ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್ ಅವರ ಹೆಸರೂ ಸಹ ಕೇಳಿಬಂದಿತ್ತು. ಅವರಿಗೂ ಸಹ ಸಚಿವ ಸ್ಥಾನ ಕೊಡಲಿಲ್ಲ. ಐವರು ಶಾಸಕರು ಹಾಗೂ ಓರ್ವ ವಿಧಾನ ಪರಿಷತ್ ಸದಸ್ಯರಲ್ಲಿ ಒಬ್ಬರಿಗಾದರೂ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕೂಡಲೇ ಬೇಡಿಕೆಗೆ ಸ್ಪಂದಿಸಬೇಕು. ಇಲ್ಲವಾದಲ್ಲಿ ಸೆಪ್ಟೆಂಬರ್ ೧೭ರಂದು ಮುಖ್ಯಮಂತ್ರಿಗಳು ನಗರಕ್ಕೆ ಬಂದಾಗ ಸಾರ್ವಜನಿಕರೊಂದಿಗೆ ಸೇರಿ ಮುತ್ತಿಗೆ ಹಾಕಲಾಗುವುದು ಎಂದು ಅವರು ಎಚ್ಚರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here