ಬೆಂಗಳೂರು ಪಟಾಕಿ ಅವಘಡ: ಅಂಗಡಿಯವರು ಪರವಾನಿಗೆ ಪಡೆಯುವಂತೆ ಡಿ.ಸಿ. ಸೂಚನೆ

0
18

ಕಲಬುರಗಿ; ಬೆಂಗಳೂರು ನಗರದ ಅತ್ತಿಬೆಲೆ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಜರುಗಿದ ಪಟಾಕಿ ಅವಘಡಗಳನ್ನು ತಪ್ಪಿಸುವ ಉದ್ದೇಶದಿಂದ ಮುಂಜಾಗ್ರತ ಕ್ರಮವಾಗಿ ಕಲಬುರಗಿ ಜಿಲ್ಲೆಯಲ್ಲಿ ಪಟಾಕಿ ಅಂಗಡಿಗಳ ಮಾಲೀಕರು ಅಂಗಡಿ ತೆರೆಯಲು ಸೂಕ್ತ ಪ್ರಾಧಿಕಾರದಿಂದ ಪರವಾನಿಗೆ ಪಡೆಯಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚಿಸಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತು ಸುವ್ಯವಸ್ಥೆ) ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ಸ್ಪೋಟಕ ನಿಯಮಗಳು-2008 ರಲ್ಲಿ ತಿಳಿಸಿರುವಂತೆ ಪಟಾಕಿ ಉತ್ಪಾದನೆ, ಸಂಗ್ರಹಣೆ, ಸಾಗಣಿಕೆ ಹಾಗೂ ಮಾರಾಟ ನಿಯಮಗಳನ್ನು ಎಲ್ಲರು ಚಾಚುತಪ್ಪದೆ ಪಾಲಿಸಬೇಕು. ಇದಲ್ಲದೆ ಅಂಗಡಿ, ಗೋದಾಮಿನಲ್ಲಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪಟಾಕಿ ಅಂಗಡಿಗಳಲ್ಲಿನ ಸುರಕ್ಷತಾ ಕ್ರಮ ತಪಾಸಣೆಗೆ ಕಲಬುರಗಿ ನಗರ ಮತ್ತು ಜಿಲ್ಲೆಯ 11 ತಾಲೂಕಿನಲ್ಲಿ ತಹಶೀಲ್ದಾರ ನೇತೃತ್ವದಲ್ಲಿ ಪೊಲೀಸ್, ಅಗ್ನಿಶಾಮಕ ಅಧಿಕಾರಿಗಳ ತಂಡ ರಚಿಸಿದ್ದು, ತಂಡವು ಅಂಗಡಿ-ಗೋದಾಮುಗಳಿಗೆ ಭೇಟಿ ನೀಡಿದಾಗ ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ಅಂಗಡಿ ಮಾಲೀಕರಲ್ಲಿ ಮನವಿ ಮಾಡಿದ್ದಾರೆ.

ಕಾಯ್ದೆ ಉಲ್ಲಂಘಿಸಿದಲ್ಲಿ ಸ್ಫೋಟಕ ವಸ್ತು ಜಪ್ತಿ: ಸ್ಪೋಟಕ ನಿಯಮಗಳು-2008ರಲ್ಲಿ ಪಟಾಕಿ ಉತ್ಪಾದನೆ, ಸಂಗ್ರಹಣೆ, ಸಾಗಣಿಕೆ ಹಾಗೂ ಮಾರಾಟದ ಕುರಿತು ಸ್ಪಷ್ಟವಾಗಿ ತಿಳಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಪಿ.ಎಸ್.ಐ ದರ್ಜೆಯ ಮೇಲ್ಪಟ್ಟ ಎಲ್ಲಾ ಅಧಿಕಾರಿಗಳು ಸ್ಫೋಟಕ ವಸ್ತು ವಶಪಡಿಸಿಕೊಳ್ಳಲು, ಬಂಧಿಸಲು ಹಾಗೂ ಸ್ಫೋಟಕ ವಸ್ತುಗಳನ್ನು ತೆಗೆದು ಹಾಕಲು ಅಧಿಕಾರ ಹೊಂದಿರುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here