ಕಲಬುರಗಿ; ಐ.ಎ.ಎಸ್./ಕೆ.ಎ.ಎಸ್. ಪರೀಕ್ಷಾ ಪೂರ್ವ ತರಬೇತಿಗಾಗಿ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರಿಂದ ಕಲಬುರಗಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತರಬೇತಿ ಕಟ್ಟಡದ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಬಿ. ಫೌಜಿಯ್ ತರನ್ನುಮ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಮಂಗಳವಾರ ಅವರು ಅಟಲ್ ಬಿಹಾರ ವಾಜಪೇಯಿ ಬಡಾವಣೆಯಲ್ಲಿ ನಿರ್ಮಿಸಲಾಗಿರುವ ಕಟ್ಟಡದ ಒಳಗಡೆಯಲ್ಲಿನ ತರಗತಿ ಕೋಣೆ, ಹಾಗೂ ಡಿಜಿಟಲ್ ಗ್ರಂಥಾಲಯ ಹಾಗೂ ಆಡಳಿತ ಮಂಡಳಿಯ ಕಚೇರಿ, ಶೌಚಾಲಯ, ಸ್ನಾನಗೃಹ ಸೇರಿದಂತೆ ಪ್ರತಿಯೊಂದು ಕೋಣೆಯ ಕೆಲಸಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈಗಾಗಲೇ ಇದಕ್ಕೆ ತಗಲುವ ವೆಚ್ಚದ ಕುರಿತು ಒಂದು ಕ್ರೀಯಾಯೋಜನೆ ಸಿದ್ದಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಯಾಣ ಕರ್ನಾಟಕದ ಭಾಗದ ಜನರಿಗೆ ಐ.ಎ.ಎಸ್/ಕೆ.ಎ.ಎಸ್. ಪರೀಕ್ಷಾ ಪೂರ್ವ ತರಬೇತಿ ಪ್ರಾರಂಭಿಸಲು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದವ ವರ್ಗಗಳ ಇಲಾಖೆ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳು ಸೇರಿ ಇಲಾಖೆ ಸಂಬಂಧಪಟ್ಟಂತೆ ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜನವರಿಯೊಳಗೆ ಅಥವಾ ಮಾರ್ಚದೊಳಗೆ ತಮಗೆ ವಹಿಸಿದ ಕೆಲಸ ಕಾರ್ಯಗಳನ್ನು ಮುಗಿಸಲು ಸೂಚಿಸಿದರು.
ಈ 2 ಎಕರೆ ಭೂಮಿಯಲ್ಲಿ ಕಂಪೌಂಡ ಗೋಡೆಗಳು ಹಾಗೂ ವಹಿಕಲ್ ಪಾರ್ಕಿಂಗ್ ನಿರ್ಮಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಸಹಾಯಕ ಆಯುಕ್ತ ಮಮತಾ ಕುಮಾರಿ, ಗ್ರೇಡ್-1 ತಹಶೀಲ್ದಾರ ನಾಗಮ್ಮ ಕಟ್ಟಿಮನಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪಿ ಶುಭ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಜಾವೀದ ಡಿ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ದಶರಥ, ಇಂಜಿನಿಯರ್ ಶೈಲೇಶ ಹುಲಿ ಇದ್ದರು.