ಯಡ್ರಾಮಿ: ಹೊಲಕ್ಕೆ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸವರ್ಣಿಯರು ದಲಿತ ಯುವಕನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿದ ಘಟನೆ ತಾಲ್ಲೂಕಿನ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.
ನೀರು ಬಿಡುವ ವಿಚಾರಕ್ಕೆ ಸಂಬಂಧ ಸವರ್ಣಿಯರಿಂದ ದಲಿತ ಯುವಕ ಕಿರಣ ತಂದೆ ಜೇವಂತ ಭಂಡಾರಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮರಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ ಎಂದು ಯಡ್ರಾಮಿ ಠಾಣೆಗೆ ದೂರು ನೀಡಲಾಗಿದೆ.
ಹಲ್ಲೆಗೊಳಗಾದ ಯುವಕ ವಿಜಯಪುರದ ಬಿಎಲ್ ಡಿಇ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಜು ತಂದೆ ಜಗನ್ನಾಥ ಯಾದಗಿರಿ ಮತ್ತು ಸಹೋದರರು ಸೇರಿ ದಲಿತ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕುಟುಂಬ ಸದಸ್ಯರು ಯಡ್ರಾಮಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.