ಶಹಾಬಾದ: ಕನ್ನಡ ರಾಜ್ಯೋತ್ಸವ ಆಚರಣೆ ನಿಮಿತ್ತ ಇದೇ ಅಕ್ಟೋಬರ್ 25ರಂದು ಬೆಳಿಗ್ಗೆ 10 ಗಂಟೆಗೆ ನಗರದ ತಹಸೀಲ್ದಾರ ಕಚೇರಿಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ತಹಸೀಲ್ದಾರ ಗುರುರಾಜ ಸಂಗಾವಿ ತಿಳಿಸಿದ್ದಾರೆ.
ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು, ಕರವೇ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ವಿವಿಧ ಸಂಘಟನೆಯ ಮುಖ್ಯಸ್ಥರು, ಸರಕಾರಿ ನೌಕರರ ಸಂಘ, ಪ್ರಾಥಮಿಕ, ಪ್ರೌಢಶಾಲಾ ಶೀಕ್ಷಕರ ಸಂಘದವರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಲು ಕೋರಿದ್ದಾರೆ.