ಸ್ಪರ್ಧಾತ್ಮಕ ಪರೀಕ್ಷೆ‌: ಬೇರೆ ಬೇರೆ ದಿನಾಂಕಗಳ ಪರೀಕ್ಷೆ ನಿಗದಿಗೆ ಸಿಎಂಗೆ ಪತ್ರ

0
30

ಕಲಬುರಗಿ: ಲೋಕಸೇವಾ ಆಯೋಗ ಹಾಗೂ ಗೃಹ ಇಲಾಖೆ ಗಳು ಒಂದೇ ದಿನ ಮೂರು ಬೇರೆ ಬೇರೆ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದ್ದು ಇದರಿಂದ ಅಭ್ಯರ್ಥಿಗಳಿಗೆ ಗೊಂದಲ ಉಂಟಾಗುತ್ತದೆ. ಹಾಗಾಗಿ, ಲೋಕ ಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇರೆ ದಿನಾಂಕದಂದು ನಡೆಸುವಂತೆ ಕೋರಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ 242 ಹುದ್ದೆಗಳ, ಸಹಕಾರ ಸಂಘಗಳ ನಿರೀಕ್ಷಕರ 47 ಹುದ್ದೆಗಳ ಹಾಗೂ ರಾಜ್ಯ ಪೊಲೀಸ್ ಇಲಾಖೆ ಕೂಡಾ ಖಾಲಿ ಇರುವ 454 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ: 05-11-2023 ರಂದು ( ಭಾನುವಾರ) ಸ್ಪರ್ಧಾತ್ಮಕ ಪರೀಕ್ಷೆ ನಿಗದಿಗೊಳಿಸಲಾಗಿದೆ.

Contact Your\'s Advertisement; 9902492681

ಸರ್ಕಾರಿ ಕೆಲಸ ಸೇರಬೇಕೆಂದು ರಾಜ್ಯದ ಯುವಕ ಯುವತಿಯರು ಪ್ರತಿಯೊಂದು ನೇಮಕಾತಿಗೂ ಅರ್ಜಿ ಸಲ್ಲಿಸಿ ವರ್ಷಗಟ್ಟಲೇ ತಯಾರಿ ನಡೆಸಿರುತ್ತಾರೆ‌. ಈಗ ಮೂರು ಹುದ್ದೆಗಳಿಗೆ ಒಂದೇ ದಿನ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಗೊಳಿಸುವುದರಿಂದ ಗೊಂದಲ ಉಂಟಾಗುತ್ತದೆ. ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕದಂದು ನಡೆಸುವಂತೆ ಹಲವಾರು ಅಭ್ಯರ್ಥಿಗಳು ತಮಗೆ ಮನವಿ ಸಲ್ಲಿಸಿರುತ್ತಾರೆ ಎಂದು ಸಚಿವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮುಂದುವರೆದು, ಕಳೆದ 5 ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯಾಗದೆ ಸಾವಿರಾರು ಅಭ್ಯರ್ಥಿಗಳು ವಿದ್ಯಾರ್ಹತೆಗೆ ಹಾಗೂ ವಯೋಮಿತಿಗೆ ತಕ್ಕಂತೆ ಸರಿಯಾಗಿ ಉದ್ಯೋಗ ಸಿಗದೆ ಈಗಾಗಲೇ ಅನ್ಯಾಯಕ್ಕೆ ಒಳಗಾಗಿದ್ದಾರೆ. ಆದ್ದರಿಂದ, ಲಕ್ಷಾಂತರ ಪ್ರತಿಭಾನ್ವಿತ ಅಭ್ಯರ್ಥಿಗಳ ಭವಿಷ್ಯದ ಹಿತದೃಷ್ಠಿಯಿಂದ ಕರ್ನಾಟಕ ಲೋಕಸೇವಾ ಆಯೋಗದಿಂದ ನಿಗದಿಯಾಗಿರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸಿಎಂ ಅವರಿಗೆ ಸಚಿವರು ಕೋರಿರುತ್ತಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here