ಕಲಬುರಗಿ: ಡಿಸೆಂಬರ್ 03 ರಂದು ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ತ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆಗಳ ಸಂಬಂಧಿಸಿದಂತೆ ನವೆಂಬರ್ 09 ರಂದು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸಾದಿಕ್ ಹುಸೈನ್ ಖಾನ್ ತಿಳಿಸಿದ್ದಾರೆ.
ನವೆಂಬರ್ 9 ರಂದು ಬೆಳಿಗ್ಗೆ 11 ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಸಭೆಗೆ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಮತ್ತು ಸಾಮಾಜಿಕ ಕರ್ಯಾಕರ್ತರು ಸೇರಿದಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರು ಆಗಮಿಸಿ ಸಲಹೆಗಳನ್ನು ನೀಡಬೇಕೆಂದು ಸಭಾ ಸೂಚನಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.