ಕಲಬುರಗಿ: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ೫೦ ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಆಳಂದ ತಾಲ್ಲೂಕಿನ ಯಳಸಂಗಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಸರ್ಕಾರದ ಆದೇಶದ ಪ್ರಯುಕ್ತ ಜಿಲ್ಲೆಯ ಪ್ರತಿ ಮನೆಯ ಮುಂದೆ ರಂಗೋಲಿ, ಹಣತೆಯ ದೀಪ ಹಚ್ಚುವ ಮೂಲಕ ಕನ್ನಡ ಪ್ರೇಮ ಮೆರೆಯಲಾಯಿತು.