KSRTC ಸಿಬ್ಬಂದಿಗಳಿಗೆ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗೆ ಶ್ರೀಜಯದೇವ ಹೃದ್ರೋಗ ಸಂಸ್ಥೆಯವರೊಂದಿಗೆ ಒಡಂಬಡಿಕೆಗೆ ಸಹಿ

0
25

ಬೆಂಗಳೂರು; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಮಸ್ತ ಸಿಬ್ಬಂದಿಗಳನ್ನು ಹೃದಯ ಸಂಬಂಧಿಸಿದ ನಿರ್ಧಿಷ್ಟವಾದ ಪರೀಕ್ಷೆ/ ತಪಾಸಣೆಗಳಿಗೆ ಒಳಪಡಿಸುವ ಅವಶ್ಯಕತೆ ಮನಗಂಡು, ನೌಕರರಲ್ಲಿ ಜಾಗೃತಿ ಮೂಡಿಸಿ, ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಅನುವಾಗುವ ಉದ್ದೇಶದಿಂದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದೊಂದಿಗೆ ಹೃದಯ ಸಂಬಂಧಿ ಹತ್ತು ಇತರೆ ವೈದ್ಯಕೀಯ ತಪಾಸಣೆಗಳನ್ನು ನೌಕರರಿಗೆ ಮಾಡಿಸಲು ತೀರ್ಮಾನಿಸಿ, ಮುಂದಿನ ಐದು ವರ್ಷಗಳ ಅವಧಿಗೆ ಒಡಂಬಡಿಕೆಯನ್ನು ಇಂದು ಮಾಡಿಕೊಳ್ಳಲಾಯಿತು.

ನಿಗಮವು “ಆರೋಗ್ಯವಂತ ನೌಕರರೇ ಸಂಸ್ಥೆಯ ಆಸ್ತಿ’ ಎಂದು ಪರಿಗಣಿಸಿದೆ. ನಿಗಮದಲ್ಲಿ ಒಟ್ಟು 34,000 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಆ ಪೈಕಿ 24,686 ಚಾಲಕ ಮತ್ತು ನಿರ್ವಾಹಕರುಗಳಾಗಿರುತ್ತಾರೆ. ನಿಗಮದ ನೌಕರರ ಕಾರ್ಯಸ್ವರೂಪ ಜೀವನಶೈಲಿ ಮತ್ತು ಇತರ ಕಾರಣಗಳಿಂದಾಗಿ ನೌಕರರಲ್ಲಿ ಹೃದಯಾಘಾತ / ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ತೀರಾ ಸಾಮಾನ್ಯವಾಗಿದೆ, ಅದರಲ್ಲೂ 40 ವರ್ಷ ಮೇಲ್ಪಟ್ಟ ಚಾಲಕರು, ನಿರ್ವಾಹಕರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿವೆ.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಸಿ.ಎನ್ ಮಂಜುನಾಥ್ ಅವರು, ಮನುಷ್ಯನ ಆರೋಗ್ಯ ಬಹಳ ಮುಖ್ಯವಾಗಿದ್ದು, ಅದನ್ನು ಬೆಲೆ ಕೊಟ್ಟು ಕೊಂಡುಕೊಳ್ಳಲಾಗದು, ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಮಾಣ ಅತಿ ಹೆಚ್ಚಳವಾಗಿದ್ದು, ಚಿಕ್ಕ ವಯಸ್ಸಿನವರಲ್ಲಿ ಇದು ಅಧಿಕವಾಗಿದೆ. ವಯಸ್ಸಾದ ತಂದೆ ತಾಯಿಗಳು ಮಕ್ಕಳನ್ನು ಆಸ್ಪತ್ರೆಗೆ ಕರೆತರುವ ಸ್ಥಿತಿ ಎದುರಾಗಿದೆ. ಮನುಷ್ಯನ ದೇಹವೇ ಅವನ ಪ್ರಮುಖ ಬಾಳ ಸಂಗಾತಿಯಾಗಿದ್ದು, ಅದನ್ನು ಯಾವುದೇ ಕಾಯಿಲೆಗಳಿಂದ ರಕ್ಷಿಸಿಕೊಳ್ಳುವುದು ಅವರ ಪ್ರಮುಖ ಜವಾಬ್ದಾರಿ ಆಗಿರುತ್ತದೆ. ಬಿಎಂಟಿಸಿಯಲ್ಲಿಯೂ ಈ ಯೋಜನೆಯಿದ್ದು, ಅಲ್ಲಿ 45 ವರುಷ ಮೇಲ್ಪಟ್ಟ ಸಿಬ್ಬಂದಿಗಳು ಈ ಯೋಜನೆಗೆ ಒಳಪಡುತ್ತಾರೆ, ಆದರೆ ಕೆಎಸ್‍ಆರ್ ಟಿಸಿಯಲ್ಲಿ 40 ವರುಷ ಮೇಲ್ಪಟ್ಟ, ಸಿಬ್ಬಂದಿಗಳಿಗೆ ಈ ಯೋಜನೆ ಅನುμÁ್ಠನ ಮಾಡಿರುವುದು ಒಳ್ಳೆಯದು ಏಕೆಂದರೆ ಈಗ 40 ರ ಆಸುಪಾಸಿನಲ್ಲಿಯೇ ಹೃದಯ ಸಂಬಂಧಿ ತೊಂದರೆಗಳು ಹೆಚ್ಚು ವರದಿಯಾಗುತ್ತಿವೆ ಎಂದರು.

Contact Your\'s Advertisement; 9902492681

ನಿಗಮವು ನಮ್ಮ ಜಯದೇವ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಇನ್ನು ಮುಂದೆ ಸಿಬ್ಬಂದಿಗಳ ಹೃದಯ ಸಂಬಂಧಿ ಕಾಯಿಲೆಗಳನ್ನು ಗುರುತಿಸಿ ಅಗತ್ಯ ಚಿಕಿತ್ಸೆ ಕೊಡುವ ಜವಾಬ್ದಾರಿ ನಮ್ಮ ಸಂಸ್ಥೆಯ ಮೇಲಿದ್ದು, ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ತಪಾಸಣೆ ಹಾಗೂ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ನಮ್ಮ ಸಂಸ್ಥೆಯು ಮೈಸೂರಿನ ಕೇಂದ್ರದಲ್ಲಿಯೂ ಸಹ ಅಲ್ಲಿಗೆ ಸಮೀಪವಿರುವ ವಿಭಾಗಗಳ ಸಿಬ್ಬಂದಿಗಳಿಗೆ ತಪಾಸಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಿಗಮದಲ್ಲಿ ಸೇವೆಯಲ್ಲಿ ಇರುವಾಗ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆ ಅಡಿಯಲ್ಲಿ ಒಂದು ಕೋಟಿ ರೂ ಗಳ ಪರಿಹಾರ ಮೊತ್ತವನ್ನು ವಿತರಿಸಲಾಯಿತು.

ಈ ವಿಶೇಷ ವಿಮಾ ಯೋಜನೆಯ ಬಗ್ಗೆ, ಡಾ.ಸಿ.ಎನ್ ಮಂಜುನಾಥ್ ರವರು ಅತೀವ ಸಂತೋಷವನ್ನು ವ್ಯಕ್ತವಡಿಸಿ, ದೇಶದ ಯಾವುದೇ ಸಂಸ್ಥೆಗಳಲ್ಲಿ ಈ ಮಾದರಿಯ ರೂ.1 ಕೋಟಿ ವಿಮಾ ಮೊತ್ತ ಪಾವತಿಸುವ ಔಟಿ ಡಿoಚಿಜ/ಔಜಿಜಿ ಡಿoಚಿಜ ಚಿಛಿಛಿiಜeಟಿಣ ಯೋಜನೆ ಜಾರಿಯಾಗಿಲ್ಲ. ಕೆ ಎಸ್ ಆರ್ ಟಿ ಸಿ ಯು ಸಿಬ್ಬಂದಿಗಳ ಬಗೆ ಜಾರಿಗೊಳಿಸುತ್ತಿರುವ ಹಲವು ಕಾರ್ಯಕ್ರಮಗಳನ್ನು ನಾನು ದಿನಪತ್ರಿಕೆಗಳಲ್ಲಿ ಓದಿ ತಿಳಿದುಕೊಂಡಿದ್ದೇನೆ. ನಿಗಮವು ಎರಡು ಮೂರು ದಿನಗಳ ಹಿಂದೆಯμÉ್ಟೀ ರೂ 10 ಲಕ್ಷಕ್ಕೆ ಏರಿಕೆ ಮಾಡಿದ ಕುಟುಂಬ ಕಲ್ಯಾಣ ಪರಿಹಾರ ಯೋಜನೆಯೂ ಸೇರಿದಂತೆ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ನೇತೃತ್ವದಲ್ಲಿ ಬಹಳ ಒಳ್ಳೆಯ ಕಾರ್ಯಗಳು ನಡೆಯುತ್ತಿರುವುದು ಅಭಿನಂದನೀಯ ಎಂದು ತಿಳಿಸಿದರು.

ಸಾರಿಗೆ ಮತ್ತು ಮುಜರಾಯಿ ಸಚಿವರು ಮಾತನಾಡಿ, ಇಂದು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ನಿಗಮವು ಒಡಂಬಡಿಕೆ ಮಾಡಿಕೊಂಡಿದ್ದು, ಹೃದಯ ಸಂಬಂಧಿ ತಪಾಸಣಿಗಳನ್ನು/ ಪರೀಕ್ಷೆಗಳನ್ನು ನಿರಂತರವಾಗಿ ಮಾಡಿಸುವುದರಿಂದ ಸಂಭವನೀಯ ಹೃದಯಾಘಾತವನ್ನು ತಪ್ಪಿಸಲು ಮತ್ತು ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ಜೀವಗಳ ರಕ್ಷಣೆ ಆಗುತ್ತದೆ ಎಂದು ತಿಳಿಸಿದರು.

ಸಿಬ್ಬಂದಿಗಳು ನಿಗಮದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ ಆದ್ದರಿಂದ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಜವಾಬ್ದಾರಿ ಕೂಡ ಆಗಿದೆ ಎಂದು ತಿಳಿಸುತ್ತಾ, ಡಾ. ಮಂಜುನಾಥ್ ರವರು ಕಡಿಮೆ ದರದಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸುತ್ತಿರುವುದಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವಿ. ಅನ್ಬುಕುಮಾರ್ ಅವರು ಮಾತನಾಡಿ, ಈಗಾಗಲೇ ನಿಗಮದ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬದ ಹಿತದೃಷ್ಟಿಯಿಂದ ಹಲವು ಕಾರ್ಮಿಕ ಕಲ್ಯಾಣ ಕಾರ್ಯಕ್ರಮಗಳನ್ನು ನಿಗಮವು ಜಾರಿಗೆ ತಂದಿದ್ದು, ಮುಂದುವರೆದ ಭಾಗವಾಗಿ ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುವುದರಿಂದ 40 ವರ್ಷ ಮೇಲ್ಪಟ್ಟ 21 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಈ ಯೋಜನೆಯು ಉಪಯೋಗವಾಗಲಿದ್ದು, ತಪಾಸಣೆಗೆ ಒಳಗಾಗುವ ಪ್ರತಿ ನೌಕರರ ಪರವಾಗಿ ನಿಗಮವು ರೂ.1200/- ಗಳನ್ನು, ಅಂದರೆ ವಾರ್ಷಿಕ ರೂ. 2.55 ಕೋಟಿಯನ್ನು ಜಯದೇವ ಆಸ್ಪತ್ರೆಗೆ ಪಾವತಿ ಮಾಡುತ್ತದೆ. ಈ ಯೋಜನೆಯು ಅಂದಾಜು ಶೇ. 62ರಷ್ಟು ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮಂಜುನಾಥ .ಟಿ ಸಹಾಯಕ ಸಂಚಾರ ನಿರೀಕ್ಷಕರು ಧರ್ಮಸ್ಥಳ ಘಟಕ ಪುತ್ತೂರು ವಿಭಾಗ ರವರು ಮಾರ್ಚ್ 17 ರಂದು ದ್ವಿಚಕ್ರದ ವಾಹನದಲ್ಲಿ ಹೋಗುವಾಗ ವಾಹನದಿಂದ ಬಿದ್ದು ಮೃತಪಟ್ಟಿರುತ್ತಾರೆ. ಇವರು ನಿಗಮದಲ್ಲಿ 34 ವರ್ಷಗಳ ಸೇವೆಯನ್ನು ಸಲ್ಲಿಸಿದ್ದು, ಇಬ್ಬರು ಪುತ್ರರನ್ನು ಅಗಲಿರುತ್ತಾರೆ. ಹಾಗೂ ಶ್ರೀನಾಥ್ ಟಿ.ಬಿ. ಚಾಲಕ, ನಿರ್ವಾಹಕ, ಬಿಲ್ಲೆ ಸಂಖ್ಯೆ, 3973 ಘಟಕ-5, ಬೆಂಗಳೂರು ಕೇಂದ್ರ ವಿಭಾಗ ರವರು ನಿಗಮದಲ್ಲಿ 24 ವರ್ಷಗಳ ಸೇವೆಯನ್ನು ಸಲ್ಲಿಸಿದ್ದು, ಏಪ್ರಿಲ್ 24 ರಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದಾಗ ಬೊಲೆರೋ ವಾಹನದೊಂದಿಗೆ ಡಿಕ್ಕಿಯಾಗಿ ಅಪಘಾತದಲ್ಲಿ ಮೃತಪಟ್ಟಿದ್ದು, ಪತ್ನಿ ಹಾಗೂ ಓರ್ವ ಪುತ್ರರನ್ನು ಅಗಲಿರುವ ಅವರ ಕುಟುಂಬದವರಿಗೆ ಇಂದು 1 ಕೋಟಿ ರೂ. ಚೆಕ್ಕನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಿಬ್ಬಂದಿ ಮತ್ತು ಜಾಗೃತಿ ವಿಭಾಗದ ನಿರ್ದೇಶಕರಾದ ಡಾ. ನಂದಿನಿ ದೇವಿ, ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here