ಕಲಬುರಗಿ; KEA ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಆರ್ ಡಿ ಪಾಟೀಲ್ ಮಹಾರಾಷ್ಟ್ರದ ಸೋಲಾಪುರ ನಲ್ಲಿ ಬಂಧಿಸಿ ಅಶೋಕ್ ನಗರ ಠಾಣೆಯಲ್ಲಿ ಆರ್ ಡಿ ಪಾಟೀಲ್ ಗೆ ವಿಚಾರಣೆ ಮಾಡಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಆರ್ ಚೇತನ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು 28 ರಂದು ನಗರದ ಶರಣಬಸವೇಶ್ವರ ವಿವಿ ಪರೀಕ್ಷಾ ಕೇಂದ್ರ ಮತ್ತು ಗುಲ್ಬರ್ಗ ವಿವಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಅಕ್ರಮ ನಡೆದಿತ್ತು. ಈ ಕುರಿತು ಎರಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಈವರೆಗೆ ಆರ್ ಡಿ ಪಾಟೀಲ್ ಸೇರಿ 6 ಜನರನ್ನ ಬಂಧಿಸಲಾಗಿದೆ ಎಂದು ತಿಳಿಸಿದರು.
ಆರೋಪಿ ಆರ್ಡಿ ಪಾಟೀಲ್ ವಿಚಾರಣೆ ನಡೆಸುತ್ತಿದ್ದು ಮಾಹಿತಿ ಕಲೆ ಹಾಕಲಾಗುತ್ತಿದ. ಆರೋಪಿ ಆರ್ ಡಿ ಪಾಟೀಲ್ ಗೆ ಸಹಾಯ ಮಾಡಿದವರ ವಿರುದ್ದವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದರು.