ಕಲಬುರಗಿ; ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ಒಂದರ ಪಕ್ಕದಲ್ಲಿರುವ ರೈಲಿಗೆ ಓರ್ವ ವ್ಯಕ್ತಿ ನೇಣು ಹಾಕಿಕೊಂಡು ಮೃತಪಟ್ಟಿರುವ ಘಟನೆ ಸೋಮವಾರ ಜರುಗಿದೆ.
ಸೋಲಾಪುರದ ನಿವಾಸಿ ಮಲ್ಲಿನಾಥ ಸಿದ್ಧಪ್ಪ ದೋಶೆಟ್ಟಿ 38 ಅತ್ಮಹತ್ಯೆಗೆ ಶರಣಾದ ವ್ಯಕ್ತಿ. ವಾಡಿಯ ರೈಲ್ವೆ ಇಲಾಖೆಯಲ್ಲಿ ಖಾಯಂ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ, ಆದರೆ ಕೆಲ ದಿನಗಳಿಂದ ಕೆಲಸಕ್ಕೆ ಗೈರಾಗಿದ್ದರು. ನಂತರ ಪೋಷಕರು ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ವಾಡಿ ಪೊಲೀಸರು ಪತ್ತೆ ಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ.
ಸೋಮವಾರ ಬೆಳಗ್ಗೆ ಮಾರ್ಕೆಟ್’ಗೆ ಹೋಗಿ ಬರುವುದಾಗಿ ಹೇಳಿ ರೈಲಿಗೆ ನೇಣು ಹಾಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಇಲಾಖೆ ಪಿಎಸ್’ಐ ಮಹಿಮೂದ್ ಪಾಶಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.