ಕಲಬುರಗಿ; 17ರಂದು ತ್ರೈಮಾಸಿಕ ಕೆ.ಡಿ.ಪಿ. ಸಭೆ

0
174

ಕಲಬುರಗಿ.ನ.13; ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಇದೇ ನವೆಂಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವರ್ ಸಿಂಗ್ ಮೀನಾ ಅವರು ತಿಳಿಸಿದ್ದಾರೆ.

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ. ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿ ವರದಿ ಮತ್ತು ಎಲ್ಲಾ ಮಾಹಿತಿಯೊಂದಿಗೆ ಈ ಸಭೆಗೆ ಹಾಜರಾಗಬೇಕೆಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here