ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ FDA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಪನ್ಯಾಸಕರು ಸಿಐಡಿ ವಶಕ್ಕೆ ಇಂದು ಪಡೆದುಕೊಂಡಿದ್ದಾರೆ.
ಉಪನ್ಯಾಸಕರಾದ ಬಸಣ್ಣ ಪೂಜಾರಿ, ಚಂದ್ರಕಾಂತ ಸಿಐಡಿ ವಶಕ್ಕೆ ಪಡೆದುಕೊಂಡಿದ್ದು, ಅಫಜಲಪುರ ಸರ್ಕಾರಿ ಪಿಯು ಕಾಲೇಜು ಪ್ರಭಾರ ಪ್ರಿನ್ಸಿಪಾಲ್ ಬಸಣ್ಣ,ಕರಜಗಿ ಗ್ರಾಮದ ಪಿಯು ಕಾಲೇಜು ಪ್ರಿನ್ಸಿಪಾಲ್ ಚಂದ್ರಕಾಂತ್ ಸೇವೆ ಸಲ್ಲಿಸುತ್ತಿದ್ದರು.
ಅಕ್ಟೋಬರ್ 28 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗಿರುವ ಎಫ್.ಡಿ.ಎ ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಆಕ್ರಮ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಸೇರಿ 16ಕ್ಕೂ ಹೆಚ್ಚು ಆರೋಪಗಳನ್ನು ಪೊಲೀಸರು ಬಂಧಿಸಿದ್ದು, ಎಲ್ಲಾ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ. ಸಿಐಡಿ ಎಸ್.ಪಿ ರಾಘವೇಂದ್ರ ಹೆಗಡೆ ಅವರ ನೇತೃತ್ವದಲ್ಲಿ ಈಡಿ ಪ್ರಕರಣದ ತನಿಖೆ ಆರಂಭಿಸಿದ್ದಾರೆ.