ವಸತಿ ನಿಲಯದ ಮಕ್ಕಳ ಸಾವಿಗೆ ಕಾರಣರಾದವರ ಮೇಲೆ ಕ್ರಮಕ್ಕೆ ಮತ್ತು ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಎಂಗೆ ಮನವಿ

0
46

ರಾಯಚೂರು: ರಾಜ್ಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳು ಒಂದಿಲ್ಲ ಒಂದು ರೀತಿಯ ನಿರ್ಲಕ್ಷ್ಯಕ್ಕೆ ಒಳಗಾಗಿ ನಿರಂತರವಾಗಿ ಅಪಘಾತ ಮತ್ತು ಸಾವಿಗೆ ತುತ್ತಾಗುತಿದ್ದು, ಸಿರವಾರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳ ಅಪಘಾತಕ್ಕೆ ಕಾರಣರಾದ ಪ್ರಾಚಾರ್ಯರು ಮತ್ತು ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸಿಎಂ ಗೆ ಮನವಿ ಪತ್ರದ ಮೂಲಕ SFI ರಾಯಚೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಕಾರ್ಯದರ್ಶಿ ರಮೇಶ್ ವೀರಾಪೂರು ಮಾತನಾಡಿ, ರಾಜ್ಯದಲ್ಲಿ ಹಾಸ್ಟೆಲ್ ವಿದ್ಯಾರ್ಥಿಗಳು ಒಂದಿಲ್ಲ ಒಂದು ರೀತಿಯ ನಿರ್ಲಕ್ಷ್ಯಕ್ಕೆ ಒಳಗಾಗಿ ನಿರಂತರವಾಗಿ ಅಪಘಾತ ಮತ್ತು ಸಾವಿಗೆ ತುತ್ತಾಗುತ್ತಲೆ ಇದ್ದಾರೆ. ನಿನ್ನೆಯಷ್ಟೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಕ್ರೀಡಾಕೂಟಕ್ಕೆ ಹೋಗಿ ವಾಪಸ್ಸು ಬರುತ್ತಿದ್ದ ಟಾಟಾ ಎಸಿ (ಗೂಡ್ಸ್) ವಾಹನ ಪಲ್ಟಿಯಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಮತ್ತು ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಮತ್ತು ಬಳ್ಳಾರಿಗೆ ಕಳುಹಿಸಿ ಕೊಡಲಾಗಿದೆ. ನೂರಾರು ಭವಿಷ್ಯದ ಕನಸನ್ನು ಹೊತ್ತು ವಸತಿ ಶಾಲೆಗೆ ಬಂದ ವಿದ್ಯಾರ್ಥಿಗಳು ಆಸ್ಪತ್ರೆ ಸೇರಿರುವುದು ದುರಂತವೇ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ವಿದ್ಯಾರ್ಥಿಗಳ ಬಗ್ಗೆ ಪ್ರಾಚಾರ್ಯರ ಬೇಜವಾಬ್ದಾರಿತನ ಹಾಗೂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣ. ಹಾಗೂ ಪೊಲೀಸ್ ಇಲಾಖೆಯ ವೈಫಲ್ಯವೂ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದು ಅವರು ಆರೋಪಿಸಿದರು.  ಗೂಡ್ಸ್ ವಾಹನಗಳಲ್ಲಿ ರಾಜಾರೋಷವಾಗಿ ಪ್ಯಾಸಿಂಜರ್ಗಳನ್ನು ತುಂಬಿಕೊಂಡು ಹೋದರೂ ಪೊಲೀಸರು ಇದನ್ನು ಪ್ರಯತ್ನವೂ ಮಾಡುವುದಿಲ್ಲ. ಬದಲಾಗಿ ದೊಡ್ಡ ಮೊತ್ತದ ಫೈನ್ ಹಾಗೂ ಶಿಕ್ಷೆಯ ಭಯ ಹುಟ್ಟಿಸಿ ಅವರಿಂದ ಹಣ ವಸೂಲಿ ಮಾಡುವುದು ನಡೆಯುತ್ತಿದೆ. ಈ ಪ್ರಕರಣದಲ್ಲಿ ಸ್ಥಳೀಯ ಆಡಳಿತ, ತಾಲೂಕಡಳಿತ ಮತ್ತು ಜಿಲ್ಲಾಡಳಿತಗಳ ನಿರ್ಲಕ್ಷ್ಯವು ಇದೆ ಎಂದು ದುರಿದರು.

ಹಾಸ್ಟೆಲ್ ವಿದ್ಯಾರ್ಥಿಗಳ ರಕ್ಷಣೆ ಮತ್ತು ಭದ್ರತಾ ನಿಟ್ಟಿನಲ್ಲಿ ಹೆಚ್ಚಿನ ಅಗತ್ಯ ಕ್ರಮ ವಹಿಸಬೇಕು.  ಅಪಘಾತಕ್ಕೆ ಒಳಗಾದ ವಿದ್ಯಾರ್ಥಿಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಇಲಾಖೆ ಮತ್ತು ಸರ್ಕಾರವೇ ಭರಿಸಬೇಕು. ವಿದ್ಯಾರ್ಥಿಗಳ ಕುಟುಂಬಕ್ಕೆ 10 ಲಕ್ಷ ಪರಿಹಾರ ಮೊತ್ತವನ್ನು ನೀಡಬೇಕು, ಸರಿಯಾದ ಸಮಯಕ್ಕೆ ಗ್ರಾಮೀಣ ಪ್ರದೇಶಗಳಿಂದ ಬಸ್ ವ್ಯವಸ್ಥೆ ಕಲ್ಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕೆಂದು ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ರಮೇಶ್ ವೀರಾಪೂರು, ಮುಖಂಡರಾದ ಚಿದಾನಂದ ಚಾಗಬಾವಿ, ಬಸಲಿಂಗ ಬ್ಯಾಗವಾಟ, ಬಸವರಾಜ್, ಅರುಣ್  ಕುಮಾರ್ ಸಿರವಾರ , ಧನರಾಜ್, ಪ್ರತಾಪ್ ಚಂದ್ರಶೇಖರ ಗೌಡ ಯೆಲ್ಹೇರಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here